ADVERTISEMENT

INDIA ಅಧಿಕಾರಕ್ಕೆ ಬಂದರೆ ಭತ್ತಕ್ಕೆ ₹300, ಗೋಧಿಗೆ ₹400 ಬೋನಸ್: ಆರ್‌ಜೆಡಿ

ಪಿಟಿಐ
Published 4 ನವೆಂಬರ್ 2025, 5:17 IST
Last Updated 4 ನವೆಂಬರ್ 2025, 5:17 IST
<div class="paragraphs"><p>ತೇಜಸ್ವಿ ಯಾದವ್ (ಸಂಗ್ರಹ ಚಿತ್ರ)&nbsp;</p></div>

ತೇಜಸ್ವಿ ಯಾದವ್ (ಸಂಗ್ರಹ ಚಿತ್ರ) 

   ಪಿಟಿಐ ಚಿತ್ರ

ಪಟ್ನಾ: ಬಿಹಾರದಲ್ಲಿ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕನಿಷ್ಠ ಬೆಂಬಲ ಬೆಲೆಗಿಂತ (ಎಂಎಸ್‌ಪಿ) ಕ್ವಿಂಟಲ್ ಭತ್ತಕ್ಕೆ ಹೆಚ್ಚುವರಿಯಾಗಿ ₹300 ಹಾಗೂ ಗೋಧಿಗೆ ₹400 ಬೋನಸ್‌ ನೀಡಲಾಗುವುದು ಎಂದು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್‌ ಹೇಳಿದ್ದಾರೆ.

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿರುವ ಅವರು, ‘ರಾಜ್ಯದ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ಪಿಎಸಿಎಸ್) ಮತ್ತು ಪ್ರಾಥಮಿಕ ಮಾರುಕಟ್ಟೆ ಸಹಕಾರಿ ಸಂಘಗಳ (ವ್ಯಾಪಾರ ಮಂಡಲಗಳು) ಮುಖ್ಯಸ್ಥರಿಗೂ ಜನಪ್ರತಿನಿಧಿಗಳ ಸ್ಥಾನಮಾನ ನೀಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.

ADVERTISEMENT

‘ನಾವು ಸರ್ಕಾರ ರಚಿಸಿದರೆ, ರಾಜ್ಯದ 8,400 ನೋಂದಾಯಿತ ‘ವ್ಯಾಪಾರ ಮಂಡಲ’ಗಳು ಮತ್ತು ಪಿಎಸಿಎಸ್‌ಗಳ ವ್ಯವಸ್ಥಾಪಕರಿಗೆ ಗೌರವಧನ ನೀಡಲು ಯೋಜಿಸುತ್ತಿದ್ದೇವೆ’ ಎಂದರು.

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು ನವೆಂಬರ್ 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.