ಆರ್‌ಜೆಡಿ ಸಂಸದ ಸಂಜಯ್ ಯಾದವ್
(ಚಿತ್ರ ಕೃಪೆ– X/@OfficeOfSanjay)
ಪಟ್ನಾ: ₹20 ಕೋಟಿ ನೀಡುವಂತೆ ವ್ಯಕ್ತಿಯೊಬ್ಬ ಬೆದರಿಕೆ ಕರೆ ಮಾಡಿದ್ದಾನೆ ಎಂದು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ರಾಜ್ಯಸಭಾ ಸಂಸದ ಸಂಜಯ್ ಯಾದವ್ ಭಾನುವಾರ ಆರೋಪಿಸಿದ್ದಾರೆ.
ಹಣ ನೀಡದಿದ್ದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದೂ ಯಾದವ್ ಹೇಳಿದ್ದಾರೆ. ಈ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
'ಶನಿವಾರ ನನಗೆ ವ್ಯಕ್ತಿಯೊಬ್ಬರಿಂದ ಸುಲಿಗೆ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ₹20 ಕೋಟಿಗೆ ಬೇಡಿಕೆಯಿಟ್ಟಿದ್ದಾನೆ. ಹಣ ನೀಡದಿದ್ದರೆ ಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಚಿವಾಲಯ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ' ಎಂದು ಯಾದವ್ ತಿಳಿಸಿದ್ದಾರೆ.
ಆದರೆ, ಕರೆ ಮಾಡಿದವರ ಹೆಸರನ್ನು ಅವರು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.
ಸಂಸದರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಸಚಿವಾಲಯ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂಜೀವ್‌ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.