ಲಖನೌ: ಸಮಾಜವಾದಿ ಪಕ್ಷದ ಜೊತೆ ತಮ್ಮ ಪಕ್ಷ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಾಗಿ ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಅಧ್ಯಕ್ಷ ಜಯಂತ್ ಚೌಧರಿ ಮಂಗಳವಾರ ಔಪಚಾರಿಕವಾಗಿ ಘೋಷಿಸಿದರು.
ಈ ಮೈತ್ರಿಕೂಟವು ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೇರಿದರೆ, ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಮೃತರಾದ ರೈತರಿಗೆ ಸ್ಮಾರಕ ನಿರ್ಮಿಸಲಿದೆ ಎಂದಿದ್ದಾರೆ.
ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬುದನ್ನು ಜನರು ಅರಿತಿದ್ದಾರೆ. ಚುನಾವಣೆಯಲ್ಲಿ ಆ ಪಕ್ಷಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದೂಜಯಂತ್ ಚೌಧರಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.