ADVERTISEMENT

ತಮಿಳುನಾಡು ರಾಜ್ಯಪಾಲರಾಗಿ ಆರ್‌.ಎನ್‌ ರವಿ ಪ್ರಮಾಣ ವಚನ ಸ್ವೀಕಾರ

ಪಿಟಿಐ
Published 18 ಸೆಪ್ಟೆಂಬರ್ 2021, 8:11 IST
Last Updated 18 ಸೆಪ್ಟೆಂಬರ್ 2021, 8:11 IST
ತಮಿಳುನಾಡಿನ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಆರ್‌.ಎನ್‌ ರವಿ ಅವರನ್ನು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಅಭಿನಂದಿಸಿದರು               –ಪಿಟಿಐ ಚಿತ್ರ
ತಮಿಳುನಾಡಿನ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಆರ್‌.ಎನ್‌ ರವಿ ಅವರನ್ನು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಅಭಿನಂದಿಸಿದರು               –ಪಿಟಿಐ ಚಿತ್ರ   

ಚೆನ್ನೈ: ತಮಿಳುನಾಡು ನೂತನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್‌ ರವಿ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಲ್ಲಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮದ್ರಾಸ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಂಜೀವ್‌ ಬ್ಯಾನರ್ಜಿ ಅವರು ಪ್ರಮಾಣವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ಸಚಿವ ಸಂಪುಟದ ಸದಸ್ಯರು, ವಿರೋಧ ಪಕ್ಷದ ನಾಯಕ ಕೆ. ಪಳನಿಸ್ವಾಮಿ ಮತ್ತು ಇತರರು ಉಪಸ್ಥಿತರಿದ್ದರು.

ಈ ಬಳಿಕ ಸ್ಟಾಲಿನ್‌ ಅವರು ರಾಜ್ಯ ವಿಧಾನಸಭೆ ಸ್ಪೀಕರ್ ಎಂ ಅಪ್ಪಾವು ಮತ್ತು ಸಂಪುಟ ಸದಸ್ಯರನ್ನು ಅವರಿಗೆ ‍ಪರಿಚಯಿಸಿದರು.

ADVERTISEMENT

ಈ ಹಿಂದಿನ ರಾಜ್ಯಪಾಲ ಬನ್ವಾರಿಲಾಲ್‌ ಪುರೋಹಿತ್‌ ಅವರನ್ನು ಪಂಜಾಬ್‌ಗೆ ವರ್ಗಾಯಿಸಲಾಗಿದೆ.

ಕಳೆದ ವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆರ್‌.ಎನ್‌ ರವಿ ಅವರನ್ನು ತಮಿಳುನಾಡು ರಾಜ್ಯಪಾಲರಾಗಿ ನೇಮಿಸಿದರು. ಮಾಜಿ ಐಪಿಎಸ್‌ ಅಧಿಕಾರಿಯಾಗಿರುವ ರವಿ ಅವರು ಈ ಹಿಂದೆ ಕೇಂದ್ರ ಸರ್ಕಾರದ ನಾಗಾ ಶಾಂತಿ ಮಾತುಕತೆಯ ಸಂವಾದಕರಾಗಿ ಕಾರ್ಯನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.