ADVERTISEMENT

ಆಗ್ರಾದಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ಸಾವು

ಪಿಟಿಐ
Published 11 ಮಾರ್ಚ್ 2021, 7:06 IST
Last Updated 11 ಮಾರ್ಚ್ 2021, 7:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನೊಯಿಡಾ: ‘ಉತ್ತರಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ಗುರುವಾರ ಬೆಳಗಿನ ಜಾವ ಎಸ್‌ಯುವಿ ಮತ್ತು ಟ್ರ್ಯಾಕ್ಟರ್‌ ನಡುವೆ ಢಿಕ್ಕಿ ಸಂಭವಿಸಿ 9 ಮಂದಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಅಪಘಾತದಲ್ಲಿ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಗ್ರಾದ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ಬಬ್ಲೂ ಕುಮಾರ್‌ ಅವರು ಹೇಳಿದರು.

‘ಗುರುವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ, ಎತ್ಮದೌಲಾ ಪೊಲೀಸ್‌ ಠಾಣೆ ವ್ಯಾಪ್ತಿಯ ಆಗ್ರಾ–ಕಾನ್ಪುರ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ಎಸ್‌ಯುವಿ ನಿಯಂತ್ರಣ ತಪ್ಪಿ, ರಸ್ತೆಯ ಇನ್ನೊಂದು ಬದಿಯಲಿದ್ದ ಟ್ರ್ಯಾಕ್ಟರ್‌ನ ಟ್ರಾಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ 12 ಮಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದರಲ್ಲಿ ಒಂಬತ್ತು ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸಂತ್ರಸ್ತರು ಜಾರ್ಖಂಡ್‌ ನಿವಾಸಿಗಳಾಗಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.