ಪಾಟ್ನಾ: ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 8 ಜನ ಮೃತಪಟ್ಟಿದ್ದಾರೆ.
ಎಲ್ಲರೂ ಸೋಮವಾರ ರಾತ್ರಿ ಕತಿಹಾರ್ ರೈಲು ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಎರಡು ಮಕ್ಕಳೂ ಸೇರಿ 8 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಪ್ರದೇಶದಲ್ಲಿ ಮಂಜು ದಟ್ಟವಾಗಿತ್ತು. ವಿರುದ್ದ ದಿಕ್ಕಿನಿಂದ ವಾಹನ ವೇಗವಾಗಿ ಬಂದಿದ್ದರಿಂದ ಅಪಘಾತವಾಗಿದೆ. ’ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ’ ಎಂದು ಪೋಲಿಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.