ADVERTISEMENT

ರಸ್ತೆ ಕಾಮಗಾರಿ: ಭೂಸ್ವಾಧೀನ ಪ್ರಕ್ರಿಯೆ ಬದಲಾವಣೆಗೆ ಶಿಫಾರಸು

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 20:42 IST
Last Updated 8 ಆಗಸ್ಟ್ 2021, 20:42 IST

ನವದೆಹಲಿ: ರಸ್ತೆ ಕಾಮಗಾರಿಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸರಳಗೊಳಿಸಲು ಸಂಸದೀಯ ಸ್ಥಾಯಿ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

‘ರಸ್ತೆ ಮತ್ತು ಹೆದ್ದಾರಿ ಕಾಮಗಾರಿಗಳು ವಿಳಂಬವಾಗಲು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ಅಡಚಣೆಗಳೇ ಪ್ರಮುಖ ಕಾರಣ. ವಿಳಂಬದಿಂದ ಕಾಮಗಾರಿಯ ವೆಚ್ಚವೂ ಏರಿಕೆಯಾಗುತ್ತದೆ. ಈ ಅಡಚಣೆ ಮತ್ತು ವೆಚ್ಚ ಏರಿಕೆಯನ್ನು ತಡೆಯಲು ಭೂಸ್ವಾಧೀನ ಪ್ರಕ್ರಿಯೆಯನ್ನು ಸರಳಗೊಳಿಸಬೇಕು’ ಎಂದು ಸಾರಿಗೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದೆ.

ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಮಾರ್ಪಾಡು ಮಾಡಲು ಸಮಿತಿಯು ಶಿಫಾರಸು ಮಾಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.