ADVERTISEMENT

ಚೆನ್ನೈ: ಬ್ಯಾಂಕ್ ಸಿಬ್ಬಂದಿಯನ್ನು ಕೂಡಿ ಹಾಕಿ ಕೆ.ಜಿ.ಗಟ್ಟಲೆ ಚಿನ್ನಾಭರಣ ಕಳವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಆಗಸ್ಟ್ 2022, 7:42 IST
Last Updated 14 ಆಗಸ್ಟ್ 2022, 7:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚೆನ್ನೈ: ತಮಿಳುನಾಡಿನಲ್ಲಿ ಬ್ಯಾಂಕ್ ಸಿಬ್ಬಂದಿಯನ್ನು ಶೌಚಾಲಯದಲ್ಲಿ ಕೂಡಿ ಹಾಕಿದ್ದ ದರೋಡೆಕೋರರು ಲಾಕರ್‌ನಲ್ಲಿದ್ದ 32 ಕೆ.ಜಿ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ.

ಚೆನ್ನೈ ನಗರದ ಅರುಂಬಕ್ಕಂ ಪ್ರದೇಶದಲ್ಲಿರುವ ಫೆಡ್‍ಬ್ಯಾಂಕ್ ಗೋಲ್ಡ್ ಲೋನ್‍ ಬ್ಯಾಂಕ್‌ನಲ್ಲಿ ಈ ಘಟನೆ ನಡೆದಿದೆ.

ಮುಖಕ್ಕೆ ಮಾಸ್ಕ್‌ ಧರಿಸಿ ಬ್ಯಾಂಕ್‌ನೊಳಗೆ ನುಗಿದ್ದ ದರೋಡೆಕೋರರು ಬ್ಯಾಂಕ್ ಸಿಬ್ಬಂದಿಯನ್ನು ಶೌಚಾಲಯದಲ್ಲಿ ಕೂಡಿ ಹಾಕಿದ್ದಾರೆ. ಬಳಿಕ ಸ್ಟ್ರಾಂಗ್ ರೂಮ್‍ನ ಕೀಗಳನ್ನು ತೆಗೆದುಕೊಂಡು ಲಾಕರ್‌ನಲ್ಲಿದ್ದ 32 ಕೆ.ಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಶಂಕರ್ ಜೀವಲ್ ತಿಳಿಸಿದ್ದಾರೆ.

ADVERTISEMENT

ದರೋಡೆಕೋರರಿಗೆ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರು ಸಹಕಾರ ನೀಡಿರುವ ಕುರಿತು ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ದರೋಡೆ ನಡೆದ ಸಂದರ್ಭ ಕಳ್ಳರು ನೀಡಿದ್ದ ತಂಪು ಪಾನೀಯ ಸೇವಿಸಿ ಪ್ರಜ್ಞಾಹೀನನಾಗಿದ್ದೆ ಎಂದು ಸೆಕ್ಯುರಿಟಿ ಗಾರ್ಡ್ ಹೇಳಿಕೆ ನೀಡಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.