ADVERTISEMENT

ಮೂರನೇ ಬಾರಿ ಇ.ಡಿ. ವಿಚಾರಣೆಗೆ ಹಾಜರಾದ ವಾದ್ರಾ

ಪಿಟಿಐ
Published 9 ಫೆಬ್ರುವರಿ 2019, 16:01 IST
Last Updated 9 ಫೆಬ್ರುವರಿ 2019, 16:01 IST

ನವದೆಹಲಿ: ಉದ್ಯಮಿ ರಾಬರ್ಟ್‌ ವಾದ್ರಾ ಅವರು ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ವಿಚಾರಣೆಗೆ ಮೂರನೇ ಬಾರಿ ಹಾಜರಾದರು.

ಕೇಂದ್ರ ದೆಹಲಿಯ ಜಮ್‌ನಗರ್‌ ಹೌಸ್‌ನಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಶನಿವಾರ ಬೆಳಿಗ್ಗೆ 10.45ಕ್ಕೆ ತಮ್ಮ ಖಾಸಗಿ ವಾಹನದಲ್ಲಿ ಬಂದರು.

ಲಂಡನ್‌ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಖರೀದಿ ಮತ್ತು ಹಣ ಪಾವತಿಗೆ ಸಂಬಂಧಿಸಿವಾದ್ರಾ ಅವರು ಇನ್ನಷ್ಟು ಬಾರಿ ವಿಚಾರಣೆಗೆ ಹಾಜರಾಗಬೇಕಾಗಿ ಬರಬಹುದು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಫೆಬ್ರುವರಿ 6 ಮತ್ತು 7ರಂದು ಎರಡು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.