ADVERTISEMENT

ಗಾಂಧಿ ಕುಟುಂಬಕ್ಕೆ ಕೆಟ್ಟ ಹೆಸರು ತರಲು ವಾದ್ರಾ ವಿರುದ್ಧ ಇ.ಡಿ ಕ್ರಮ: ಖರ್ಗೆ

ಪಿಟಿಐ
Published 19 ಜುಲೈ 2025, 10:00 IST
Last Updated 19 ಜುಲೈ 2025, 10:00 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ</p></div>

ಮಲ್ಲಿಕಾರ್ಜುನ ಖರ್ಗೆ

   

ಬೆಂಗಳೂರು: ಸಂಸದೆ ಪ್ರಿಯಾಂಕಾ ವಾದ್ರಾ ಪತಿ, ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರೋಪ ಪಟ್ಟಿಯು ತನ್ನ ಹಾಗೂ ಗಾಂಧಿ ಕುಟುಂಬದ ಬಗ್ಗೆ ಕೆಟ್ಟ ಹೆಸರು ತರುವ ಹಾಗೂ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸುವ ಪ್ರಯತ್ನ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಹರಿಯಾಣದ ಶಿಖೋಪುರದ ಭೂಮಿ ವ್ಯವಹಾರದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯವು ಗುರುವಾರ ಆರೋಪ ಪಟ್ಟಿ ಸಲ್ಲಿಸಿತ್ತು.

ADVERTISEMENT

‘ವ್ಯಕ್ತಿಯ ವಿರುದ್ಧ ಸೇಡು ತೀರಿಸಿಕೊಳ್ಳಲು, ಪಕ್ಷವನ್ನು ಗುರಿಯಾಗಿಸಲು ವಾದ್ರಾ ಅವರ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ವಾದ್ರಾ ಹಾಗೂ ಗಾಂಧಿ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಸಲುವಾಗಿ ಹೀಗೆ ಮಾಡಲಾಗಿದೆ. ಅದರಲ್ಲಿ ಅವರು ಯಶ ಕಾಣರು. ಎಲ್ಲದಕ್ಕೂ ನ್ಯಾಯಾಲಯ ಇದೆ’ ಎಂದು ಹೇಳಿದ್ದಾರೆ.

‘ವಾದ್ರಾ ಅವರಿಗೆ ತೊಂದರೆ ಕೊಡುತ್ತಿರುವುದು ಸರಿಯಲ್ಲ. ಅವರ ಒಳ್ಳೆಯ ಕೆಲಸವನ್ನು ನಾವು ಬೆಂಬಲಿಸುತ್ತೇವೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಭೂಮಿ ಜಿಹಾದ್‌ಗೆ ಬೆಂಬಲ ನೀಡುತ್ತಿದೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಭೂಮಿ ಜಿಹಾದ್ ಎಂದರೆ ಏನೆಂದು ನನಗೆ ತಿಳಿದಿಲ್ಲ. ಒಂದು ವೇಳೆ ನನ್ನ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದರೆ ನಾನು ಸ್ವಾಗತಿಸುವೆ. ಅವರು ಕ್ರಮ ತೆಗೆದುಕೊಂಡಾಗ ಪ್ರತಿಕ್ರಿಯಿಸುವೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.