ADVERTISEMENT

ಬೆನ್ನು ನೋವು: ರಾಬರ್ಟ್ ವಾದ್ರಾ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2019, 6:54 IST
Last Updated 22 ಅಕ್ಟೋಬರ್ 2019, 6:54 IST
   

ನೊಯ್ಡಾ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆನ್ನು ನೋವಿನಿಂದ ಬಳಲುತ್ತಿರುವ ವಾದ್ರಾ ನೋಯ್ಡಾದ ಮೆಟ್ರೋ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ವಾದ್ರಾ ಅವರು ಬೆನ್ನು ನೋವಿನ ಹಿನ್ನೆಲೆಸೋಮವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.