ADVERTISEMENT

ಇ.ಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ರಾಬರ್ಟ್ ವಾದ್ರಾ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2019, 12:35 IST
Last Updated 6 ಫೆಬ್ರುವರಿ 2019, 12:35 IST
   

ನವದೆಹಲಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪತಿ ರಾಬರ್ಟ್‌ ವಾದ್ರಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಜಾರಿ ನಿರ್ದೇಶನಾಲಯ(ಇ.ಡಿ) ದ ವಿಚಾರಣೆಗೆ ಹಾಜರಾಗಿದ್ದಾರೆ.

ವಿದೇಶಗಳಲ್ಲಿ ಬೇನಾಮಿ ಆಸ್ತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆಇ.ಡಿ ಅಧಿಕಾರಿಗಳ ಎದುರುರಾಬರ್ಟ್‌ ವಾದ್ರಾ ವಿಚಾರಣೆಗೆ ಹಾಜರಾದರು. ಪ್ರಿಯಾಂಕ ಗಾಂಧಿ ಕೂಡ ಪತಿ ವಾದ್ರಾ ಜತೆಗೆ ಇಡಿ ಕಚೇರಿವರೆಗೂ ಬಂದಿದ್ದರು. ವಾದ್ರಾ ಕಚೇರಿ ಒಳಗೆ ಹೋದ ಬಳಿಕ ಅವರು ಅಲ್ಲಿಂದ ತೆರಳಿದರು.

ಸಂಜೆ ನಾಲ್ಕು ಗಂಟೆಗೆ ಹಾಜರಾದ ಅವರನ್ನು ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ದೆಹಲಿ ಹೈಕೋರ್ಟ್‌ ಫೆಬ್ರುವರಿ 16ರ ವರೆಗೂ ಜಾಮೀನು ನೀಡಿದೆ.

ADVERTISEMENT

ಡಿಎಲ್‌ಎಫ್‌ ಮತ್ತು ಓಂಕಾರೇಶ್ವರ ಪ್ರಾಪರ್ಟೀಸ್‌ ಮೂಲಕಗುರುಗ್ರಾಮದಲ್ಲಿ ಅಕ್ರಮ ಭೂ ಖರೀದಿ ಹಾಗೂ ವಾದ್ರಾ ಅವರ ಕಂಪೆನಿಯಾದ ಸ್ಕೈ ಲೈಟ್‌ ಹಾಸ್ಪಿಟಾಲಿಟಿಮೂಲಕ ಅಕ್ರಮ ಹಣ ವರ್ಗಾವಣೆ ಮತ್ತು ವಿದೇಶಗಳಲ್ಲಿ ಅಕ್ರಮ ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ ಎಂದು ಇ.ಡಿಯ ಉನ್ನತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.