ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಕಳಿಸಿದೆ.ದೆಹಲಿಯಲ್ಲಿರುವ ಕಚೇರಿಗೆ ಗುರುವಾರ ಹಾಜರಾಗುವಂತೆ ವಾದ್ರಾ ಅವರಿಗೆ ಇ.ಡಿ ಆದೇಶಿಸಿದೆ.
ಅಕ್ರಮ ಹಣ ವ್ಯವಹಾರ ಪ್ರಕರಣದಲ್ಲಿ ವಾದ್ರಾ ಅವರಿಗೆ ಅನುಮತಿಸಿದ್ದ ನಿರೀಕ್ಷಣಾ ಜಾಮೀನು ರದ್ದು ಮಾಡಬೇಕೆಂದು ಕೇಂದ್ರ ತನಿಖಾ ಸಮಿತಿ ಶುಕ್ರವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು.
ವಿದೇಶಗಳಲ್ಲಿ ಬೇನಾಮಿ ಆಸ್ತಿ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ವಾದ್ರಾ ಮೇಲಿದೆ.ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ ವಾದ್ರಾ ಅವರಿಗೆ ಏಪ್ರಿಲ್ 1 ರಂದು ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿತ್ತು. ಜಾರಿ ನಿರ್ದೇಶನಾಲಯ ಈ ಜಾಮೀನನ್ನು ರದ್ದುಗೊಳಿಸಬೇಕೆಂದು ದೆಹಲಿಹೈಕೋರ್ಟ್‌ಗೆ ಮನವಿ ಮಾಡಿದೆ.ಅದೇ ವೇಳೆ ಇ.ಡಿ ಮನವಿಗೆ ಜುಲೈ 17ರ ಒಳಗೆ ಉತ್ತರಿಸುವಂತೆ ದೆಹಲಿ ಹೈಕೋರ್ಟ್ ವಾದ್ರಾ ಅವರಿಗೆ ನೋಟಿಸ್ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.