
ಪಿಟಿಐ(ಸಾಂದರ್ಭಿಕ ಚಿತ್ರ)
ಹೈದರಾಬಾದ್: ಕುಡಿದ ಮತ್ತಿನಲ್ಲಿ ನಡೆದ ಜಗಳದಲ್ಲಿ 19 ವರ್ಷದ ರೋಹಿಂಗ್ಯಾ ಯುವಕನೊಬ್ಬ ಮತ್ತೊಬ್ಬ ರೋಹಿಂಗ್ಯಾ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
‘ಬಾಲಾಪುರದಲ್ಲಿರುವ ರೋಹಿಂಗ್ಯಾ ನಿರಾಶ್ರಿತ ಶಿಬಿರದಲ್ಲಿ ಡಿಸೆಂಬರ್ 17ರಂದು ಘಟನೆ ನಡೆದಿದೆ. ಮದ್ಯದ ಅಮಲಿನಲ್ಲಿ ಇಬ್ಬರೂ ಜಗಳವಾಡಿಕೊಂಡಿದ್ದಾರೆ. ಆರೋಪಿಯು 19 ಬಾರಿ ದೇಹದ ವಿವಿಧ ಭಾಗಗಳಿಗೆ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.