ADVERTISEMENT

ಆರೋಪಿಗಳ ವಿರುದ್ಧ ಎಂಸಿಒಸಿಎ ಅಡಿ ಪ್ರಕರಣ

ನಿರ್ದೇಶಕ ರೋಹಿತ್ ಶೆಟ್ಟಿ ಅವರ ನಿವಾಸದ ಮೇಲೆ ಗುಂಡಿನ ದಾಳಿ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 16:22 IST
Last Updated 11 ಫೆಬ್ರುವರಿ 2026, 16:22 IST
.
.   

ಮುಂಬೈ (ಪಿಟಿಐ): ನಿರ್ದೇಶಕ ರೋಹಿತ್‌ ಶೆಟ್ಟಿ ಅವರ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ್ದ ಆರೋಪಿಗಳ ವಿರುದ್ಧ ಮುಂಬೈ ಪೊಲೀಸರು, ಮಹಾರಾಷ್ಟ್ರ ಸಂಘಟಿತ ಅಪರಾಧ ಕೃತ್ಯಗಳ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐವರನ್ನು ಬಂಧಿಸಲಾಗಿದೆ. ಈ ಆರೋಪಿಗಳ ಕಸ್ಟಡಿ ಅವಧಿಯು ಬುಧವಾರ ಕೊನೆಗೊಂಡಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.

‘ಕೆಲವು ಆರೋಪಿಗಳು ಈ ಮುನ್ನವೂ ಹಲವು ಗಂಭೀರ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದರು. ಹೀಗಾಗಿ ಎಂಸಿಒಸಿಎಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ADVERTISEMENT

ಫೆ.1ರಂದು ರೋಹಿತ್‌ ಶೆಟ್ಟಿ ಅವರ ನಿವಾಸದ ಮೊದಲ ಮಹಡಿಯ ಮೇಲೆ ಐದು ಸುತ್ತು ಗುಂಡು ಹಾರಿಸಲಾಗಿತ್ತು. ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ನ ಸದಸ್ಯ ಶುಭಂ ಲೋಂಕರ್ ಸೂಚನೆ ಮೇರೆಗೆ ಆರೋಪಿಗಳು ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಶುಭಂ ಈ ಪ್ರಕರಣ ಸೇರಿದಂತೆ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಮತ್ತು ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡು ಹಾರಿಸಿದ ಪ್ರಕರಣದಲ್ಲೂ ಬೇಕಾಗಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.