ADVERTISEMENT

ಗುಜರಾತ್: ಪಾಕಿಸ್ತಾನದ ಬೋಟ್‌ನಿಂದ ₹ 360 ಕೋಟಿ ಮೌಲ್ಯದ ಹೆರಾಯಿನ್ ವಶ

ಪಿಟಿಐ
Published 8 ಅಕ್ಟೋಬರ್ 2022, 5:21 IST
Last Updated 8 ಅಕ್ಟೋಬರ್ 2022, 5:21 IST
   

ಅಹಮದಾಬಾದ್: ಕೋಸ್ಟ್ ಗಾರ್ಡ್ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಬೋಟ್‌ನಿಂದ ₹ 360 ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಸಿಜಿ ಮತ್ತು ಎಟಿಎಸ್ ಸಿಬ್ಬಂದಿ ಅರಬ್ಬಿ ಸಮುದ್ರದಲ್ಲಿ 50 ಕೆ.ಜಿ ಹೆರಾಯಿನ್ ಹೊಂದಿದ್ದ ಅಲ್ ಸಕರ್ ಬೋಟ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬೋಟ್‌ನಲ್ಲಿದ್ದ ಆರು ಮಂದಿಯನ್ನು ಹೆಚ್ಚಿನ ತನಿಖೆಗಾಗಿ ರಾಜ್ಯದ ಜಖೌ ಬಂದರಿಗೆ ತರಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಶುಕ್ರವಾರ, ಮುಂಬೈ ಮತ್ತು ಗುಜರಾತ್‌ನ ವಿವಿಧೆಡೆ ದಾಳಿ ನಡೆಸಿದ್ದ ರಾಷ್ಟ್ರೀಯ ಮಾದಕವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ₹120 ಕೋಟಿ ಮೌಲ್ಯದ ಮೆಫೆಡ್ರೋನ್‌ ಹೆಸರಿನ 60 ಕೆ.ಜಿ. ಡ್ರಗ್ಸ್ ವಶಪಡಿಸಿಕೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.