ADVERTISEMENT

ತೆಲಂಗಾಣ ವಿಧಾನಸಭೆ ಚುನಾವಣೆ: ಅಪಾರ ಪ್ರಮಾಣದ ಮದ್ಯ, ಸರಕು ಸೇರಿ ₹ 82.2 ಕೋಟಿ ವಶ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2018, 6:58 IST
Last Updated 16 ನವೆಂಬರ್ 2018, 6:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೈದರಾಬಾದ್‌: ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ತೆಲಂಗಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ₹ 6.6 ಕೋಟಿ ಮೌಲ್ಯದ ಮದ್ಯ, ಸರಕು ಸೇರಿದಂತೆ ಒಟ್ಟು ₹ 82.2 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಮಾತನಾಡಿರುವ ತೆಲಂಗಾಣ ಮುಖ್ಯ ಚುನಾವಣಾಧಿಕಾರಿ ರಜತ್‌ ಕುಮಾರ್ ಅವರು, ‘ಚುನಾವಣಾ ಅಕ್ರಮಗಳಿಗೆ ಅವಕಾಶ ನೀಡುವುದಿಲ್ಲ. ವಿವಿಧ ರಾಜಕೀಯ ಪಕ್ಷಗಳ ನಾಯಕರ ವಿರುದ್ಧ ದೂರುಗಳು ಕೇಳಿ ಬಂದಿವೆ. ತನಿಖೆ ನಡೆಸಿಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದ್ದಾರೆ.

ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಆಲ್‌ ಇಂಡಿಯಾ ಮಜ್ಲಿಸ್‌ ಇತ್ತೆಹಾದುಲ್‌ ಮಸ್ಲಿಮೀನ್‌ (ಎಐಎಂಐಎಂ) ಪಕ್ಷದ ಇಬ್ಬರು ನಾಯಕರ ವಿರುದ್ಧ ಗುರುವಾರ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ADVERTISEMENT

ತೆಲಂಗಾಣ ವಿಧಾನಸಭೆಯ ಒಟ್ಟು 119 ಸ್ಥಾನಗಳಿಗೆ ಡಿಸೆಂಬರ್‌ 07ರಂದು ನಡೆಯಲಿರುವ ಚುನಾವಣೆಗೆ ಇದುವರೆಗೆ ಒಟ್ಟು 418 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಡಿಸೆಂಬರ್‌ 11ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.