ADVERTISEMENT

ಮಹಿಳೆಯರ ಪ್ರವೇಶಕ್ಕೆ ವಿರೋಧವಿಲ್ಲ, ಸಂಪ್ರದಾಯ ಬದಲಿಸಬೇಡಿ: ಆರ್‌ಎಸ್‌ಎಸ್

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2018, 11:03 IST
Last Updated 2 ನವೆಂಬರ್ 2018, 11:03 IST
ಸುರೇಶ್ ಜೋಷಿ
ಸುರೇಶ್ ಜೋಷಿ    

ಮುಂಬೈ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ಕೇರಳದಲ್ಲಿ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಆರ್‌ಎಸ್‌ಎಸ್ ಬೆಂಬಲ ಸೂಚಿಸಿದೆ.

ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ನಮ್ಮ ವಿರೋಧವಿಲ್ಲ, ಆದರೆ ದೇವಾಲಯಗಳಿಗೂ ಅದರದ್ದೇ ಆದ ಸಂಪ್ರದಾಯಗಳಿವೆ. ಅದನ್ನು ಪಾಲಿಸಬೇಕು ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಜೋಷಿ ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ಸಂಘ ಪರಿವಾರದ ಸಂಘಟನೆಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜೋಷಿ ಈ ರೀತಿ ಹೇಳಿರುವುದಾಗಿ ಮಾತೃಭೂಮಿ ಪತ್ರಿಕೆ ವರದಿ ಮಾಡಿದೆ.

ADVERTISEMENT

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಬರುವ ಮುನ್ನ ಎಲ್ಲ ದೇವಾಲಯಗಳಲ್ಲಿಯೂ ಮಹಿಳೆಯರ ಪ್ರವೇಶ ಅನುಮತಿ ನೀಡಬೇಕೆಂದು ಆರ್‌ಎಸ್‌ಎಸ್ಒತ್ತಾಯಿಸಿತ್ತು. ಆದರೆ ಶಬರಿಮಲೆ ತೀರ್ಪು ಬಂದ ನಂತರ ನಿಲುವು ಬದಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.