ADVERTISEMENT

ಇಂದಿನಿಂದ ಆರ್‌ಎಸ್‌ಎಸ್‌ ಕಾರ್ಯಕಾರಿಣಿ: ದಲಿತರ ಓಲೈಕೆ ಕುರಿತು ಚರ್ಚೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2022, 19:30 IST
Last Updated 15 ಅಕ್ಟೋಬರ್ 2022, 19:30 IST
ಮೋಹನ್ ಭಾಗವತ್
ಮೋಹನ್ ಭಾಗವತ್   

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನಾಲ್ಕು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯು ಉತ್ತರ ಪ್ರದೇಶದ‍ಪ್ರಯಾಗ್‌ರಾಜ್‌ನಲ್ಲಿ ಭಾನುವಾರ ಆರಂಭವಾಗಲಿದೆ. ದಲಿತರ ಓಲೈಕೆ ನೀತಿಯನ್ನು ಬಲಪಡಿಸಲು ಅನುಸರಿಸಬೇಕಾದ ಮಾರ್ಗೋಪಾಯಗಳ ಕುರಿತು ಸಭೆಯಲ್ಲಿ ಮುಖ್ಯವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.

2025ರಲ್ಲಿ ಆರ್‌ಎಸ್‌ಎಸ್‌ ಶತಮಾನೋತ್ಸವ ಕಾರ್ಯಕ್ರಮ ನಡೆಸಲು ಉದ್ದೇಶಿಸಿದ್ದು, ಇದರ ಪೂರ್ವಭಾವಿ ಸಿದ್ಧತೆ, 2024ರ ವೇಳೆಗೆ ಸಂಘದ ಶಾಖೆಗಳನ್ನು 55 ಸಾವಿರದಿಂದ 1 ಲಕ್ಷಕ್ಕೆ ಹೆಚ್ಚಳ ಮಾಡುವ ಕುರಿತೂ ಸಭೆಯಲ್ಲಿ ಚರ್ಚಿಸಲಾಗುತ್ತದೆ.

‘ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಇದೇ 5ರಂದು ನಾಗಪುರದಲ್ಲಿ ನಡೆದಿದ್ದ ವಿಜಯದಶಮಿ ಕಾರ್ಯಕ್ರಮದಲ್ಲಿ ಸಂಘದ ಪ್ರಮುಖ ಚಟುವಟಿಕೆಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ, ಮಾತೃಭಾಷೆಯ ಶಿಕ್ಷಣ ನೀಡುವ, ಮುಸ್ಲಿಂ ಬುದ್ದಿಜೀವಿಗಳು ಹಾಗೂ ಪಾದ್ರಿಗಳೊಂದಿಗೆ ಸಂವಾದ ನಡೆಸುವುದೂ ಸೇರಿದಂತೆ ಅನೇಕ ವಿಚಾರಗಳ ಕುರಿತು ಪ್ರಸ್ತಾಪಿಸಿದ್ದರು. ಇವುಗಳ ಕುರಿತೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ’ ಎಂದು ಆರ್‌ಎಸ್‌ಎಸ್‌ನ ಪ್ರಚಾರ ವಿಭಾಗದ ಮುಖ್ಯಸ್ಥ ಸುನಿಲ್‌ ಅಂಬೇಡ್ಕರ್‌ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.