
ಪಿಟಿಐ
ಜೈಪುರ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನವೆಂಬರ್ 13ರಿಂದ ನಾಲ್ಕು ದಿನಗಳ ಅವಧಿಗೆ ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ತಮ್ಮ ಸಂಸ್ಥೆಯ ಶತಮಾನೋತ್ಸವದ ಕಾರ್ಯಕ್ರಮಗಳ ಭಾಗವಾಗಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ.
ಭಾಗವತ್ ನವೆಂಬರ್ 12ರಂದು ಜೈಪುರ ತಲುಪಲಿದ್ದಾರೆ ಎಂದು ರಾಜಸ್ಥಾನ ಪ್ರಾಂತೀಯ ಸಂಘಚಾಲಕ ಡಾ. ರಮೇಶ್ ಅಗರ್‌ವಾಲ್ ಹೇಳಿದ್ದಾರೆ. ಆರ್‌ಎಸ್‌ಎಸ್ ಕಾರ್ಯಕರ್ತರ ಸಭೆಯ ಹೊರತಾಗಿ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.