ADVERTISEMENT

ಅರುಣ್ ಜೆಟ್ಲಿ ಆರೋಗ್ಯ ವಿಚಾರಿಸಲು ಏಮ್ಸ್‌ಗೆ ಭೇಟಿ ನೀಡಿದ ಮೋಹನ್‌ ಭಾಗವತ್

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2019, 11:14 IST
Last Updated 18 ಆಗಸ್ಟ್ 2019, 11:14 IST
   

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಅರುಣ್‌ ಜೇಟ್ಲಿ(66) ಅವರ ಆರೋಗ್ಯ ವಿಚಾರಿಸಲುಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ದೆಹಲಿಯ ಏಮ್ಸ್‌ಗೆ ಭಾನುವಾರ ಭೇಟಿ ನೀಡಿದರು.

ಜೇಟ್ಲಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಆಗಸ್ಟ್ 9 ರಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಪ್ರಧಾನಿ ನರೇಂದ್ರ ಮೋದಿ ಹಾಗೂರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ಅವರು ಆಸ್ಟ್ರತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

ರಾಷ್ಟ್ರಪತಿ ರಾಮನಾಥ ಕೋವಿಂದ್, ಗೃಹ ಸಚಿವ ಅಮೀತ್ ಶಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶುಕ್ರವಾರ ಭೇಟಿ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.