ADVERTISEMENT

ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ RSSಗೆ ಏನು ಕೆಲಸ: ಖರ್ಗೆ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಜನವರಿ 2026, 5:34 IST
Last Updated 14 ಜನವರಿ 2026, 5:34 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಬೆಂಗಳೂರು: ‘ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ಪ್ರತಿನಿಧಿಗಳನ್ನು ಬಿಜೆಪಿಯ ಸಾಂಸ್ಥಿಕ ಹಾಗೂ ಸೈದ್ಧಾಂತಿ ಪೋಷಕ ಸಂಸ್ಥೆಯಾದ ಮತ್ತು ನೋಂದಾಯಿಸದ ಆರ್‌ಎಸ್‌ಎಸ್‌ ಮುಖಂಡರ ಭೇಟಿ ಯಾವ ಉದ್ದೇಶಕ್ಕಾಗಿ’ ಎಂದು ಕರ್ನಾಟಕ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿಷಯ ಹಂಚಿಕೊಂಡಿರುವ ಅವರು, ‘ಎರಡೂ ಪಕ್ಷಗಳ ನಡುವಿನ ಸಂವಹನದಲ್ಲಿ ಚೀನಾದ ಪಕ್ಷದೊಂದಿಗೆ ಒಂದು ಎನ್‌ಜಿಒಗೆ ಯಾವ ರೀತಿಯ ಕೆಲಸ? ಈ ಘಟನೆಯಿಂದ ಕೇಂದ್ರ ಸರ್ಕಾರವನ್ನು ಯಾರು ಮುನ್ನಡೆಸುತ್ತಿದ್ದಾರೆ ಎಂಬುದು ಅರ್ಥವಾಗುತ್ತದೆ’ ಎಂದಿದ್ದಾರೆ. 

‘ಆರ್‌ಎಸ್‌ಎಸ್ ಹಿಂದೆಯೂ ರಾಜಕಾರಣದಲ್ಲಿತ್ತು. ಈಗಲೂ ಇದೆ, ಮುಂದೆಯೂ ಇರಲಿದೆ. ಪ್ರಧಾನಿ ಮೋದಿ ಅವರ ಕೆಂಗಣ್ಣಿನಿಂದ ಕೆಂಪು ಹಾಸು ನೀತಿ ಬಯಲಾಗಿದೆ. ಅದರಲ್ಲೂ ವಾಸ್ತವಿಕ ನಿಯಂತ್ರಣ ರೇಖೆಯ ವಿಷಯದಲ್ಲಿ ಬೀಜಿಂಗ್‌ನ ನಿರಂತರ ಹಸ್ತಕ್ಷೇಪವನ್ನು ಸಹಿಸಿಕೊಳ್ಳುತ್ತಿರುವ ಕೇಂದ್ರದ ನಿಲುವನ್ನು ಗಮನಿಸಿದರೆ, ಇವರು ವಿದೇಶಾಂಗ ನೀತಿಯ ಹೆಸರಲ್ಲಿ ಸರ್ಕಸ್ ನಡೆಸುತ್ತಿದ್ದಾರೆ’ ಎಂದು ಆಕ್ಷೇಪಿಸಿದ್ದಾರೆ. 

ADVERTISEMENT

ಖರ್ಗೆ ಅವರ ಈ ಟ್ವೀಟ್‌ಗೆ ಹಲವರು ಪ್ರತಿಕ್ರಿಯಿಸಿದ್ದಾರೆ. 2008ರಲ್ಲಿ ಅಂದಿನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಚೀನಾದ ಆಡಳಿತಾರೂಢ ಸಿಪಿಸಿ ಜತೆ ಒಡಂಬಡಿಕೆಗೆ ಸಹಿ ಹಾಕಿದ್ದರು. ಇದಕ್ಕೆ ಏನಂತಿರಾ ಎಂದು ಚಿತ್ರ ಸಹಿತ ಪ್ರಶ್ನಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.