ADVERTISEMENT

ಬಿಜೆಪಿಯನ್ನು ಆರ್‌ಎಸ್‌ಎಸ್‌ ನಿಯಂತ್ರಿಸುತ್ತಿಲ್ಲ: ಮೋಹನ್ ಭಾಗವತ್

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 4:32 IST
Last Updated 19 ಫೆಬ್ರುವರಿ 2026, 4:32 IST
ಮೋಹನ್ ಭಾಗವತ್
ಮೋಹನ್ ಭಾಗವತ್   

ಲಖನೌ: ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್‌ಎಸ್‌ಎಸ್‌) ಬಿಜೆಪಿಯನ್ನು ರಿಮೋಟ್ ಕಂಟ್ರೋಲ್ ಮಾಡುತ್ತಿಲ್ಲ ಎಂದು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಬುಧವಾರ ಹೇಳಿದ್ದಾರೆ.

ಹೀಗಿದ್ದರೂ, ಬಿಜೆಪಿಯನ್ನು ವಿರೋಧಿಸುವವರು ಆರ್‌ಎಸ್‌ಎಸ್‌ ಅನ್ನೂ ವಿರೋಧಿಸುತ್ತಾರೆ ಎಂದಿದ್ದಾರೆ.

ಇಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಅವರು, ಸಂಘದ ಸ್ವಯಂ ಸೇವಕರು ಬಿಜೆಪಿಗೆ ಸೇರಿ ಅಲ್ಲಿನ ಪ್ರಮುಖ ಹುದ್ದೆಗಳಲ್ಲಿ ಇದ್ದಾರೆ. ಆದರೆ ಬಿಜೆಪಿಯನ್ನು ಆರ್‌ಎಸ್‌ಎಸ್‌ ನಿಯಂತ್ರಿಸುತ್ತದೆ ಎನ್ನುವುದು ತಪ್ಪಾಗುತ್ತದೆ ಎಂದು ಹೇಳಿದ್ದಾರೆ.

ADVERTISEMENT

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಮೇಲೆ ಹೇರಿದ ತೆರಿಗೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅಮೆರಿಕವು ಆರ್ಥಿಕ ಹಾಗೂ ಸೇನಾ ಬಲವನ್ನು ಬಳಸಿ ಭಾರತವನ್ನು ಮಂಡಿಯೂರಿಸಲು ಪ್ರಯತ್ನಿಸುತ್ತಿದ್ದಾರೆ, ಆದರೆ ಭಾರತ ಬಲಿಷ್ಠವಾಗಿದೆ’ ಎಂದರು.

ಉತ್ತರ ಪ್ರದೇಶ ಪ್ರಸ್ತುತ ರಾಜಕೀಯ ಸನ್ನಿವೇಶಗಳ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆಗೆ ಭಾಗವತ್ ಚರ್ಚಿಸಿದ್ದಾರೆ ಎನ್ನಲಾಗಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.