ADVERTISEMENT

ಪಿಎಫ್‌ಐ ಮಾತ್ರ ಏಕೆ, ಆರ್‌ಎಸ್‌ಎಸ್‌ ನಿಷೇಧ ಯಾವಾಗ: ಕಾಂಗ್ರೆಸ್ ಸಂಸ‌ದ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಸೆಪ್ಟೆಂಬರ್ 2022, 6:02 IST
Last Updated 28 ಸೆಪ್ಟೆಂಬರ್ 2022, 6:02 IST
ಕೋಡಿಕುನ್ನಿಲ್‌ ಸುರೇಶ್‌
ಕೋಡಿಕುನ್ನಿಲ್‌ ಸುರೇಶ್‌   

ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದಆದೇಶವನ್ನು ಕೇರಳದ ಕಾಂಗ್ರೆಸ್ ಸಂಸ‌ದ ಕೋಡಿಕುನ್ನಿಲ್‌ ಸುರೇಶ್‌ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿದರೀತಿಯಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್‌ಎಸ್‌ಎಸ್‌) ಸಹ ನಿಷೇಧಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಕೇವಲ ಪಿಎಫ್‌ಐ ನಿಷೇಧಿಸುವುದೊಂದೇ ಪರಿಹಾರವಲ್ಲ. ಆರ್‌ಎಸ್‌ಎಸ್‌ ಕೂಡ ದೇಶದಾದ್ಯಂತ ಹಿಂದೂ ಕೋಮುವಾದವನ್ನು ಹರಡುತ್ತಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಆರ್‌ಎಸ್‌ಎಸ್ ಮತ್ತು ಪಿಎಫ್‌ಐ ಎರಡೂ ಸಮಾನ, ಆದ್ದರಿಂದ ಸರ್ಕಾರ ಎರಡನ್ನೂ ನಿಷೇಧಿಸಬೇಕು. ಪಿಎಫ್‌ಐಗೆ ಮಾತ್ರ ಏಕೆ ನಿಷೇಧ ಎಂದು ಕೋಡಿಕುನ್ನಿಲ್‌ ಸುರೇಶ್‌ ಪ್ರಶ್ನಿಸಿದ್ದಾರೆ.

ADVERTISEMENT

ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಾದ ರಿಹಾಬ್ ಇಂಡಿಯಾ ಫೌಂಡೇಶನ್ (ಆರ್‌ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ಎನ್‌ಸಿಎಚ್‌ಆರ್‌ಒ, ನ್ಯಾಷನಲ್‌ ವುಮೆನ್ಸ್‌ ಫ್ರಂಟ್‌ (ಎನ್‌ಡಬ್ಲ್ಯೂಎಫ್‌), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಸೇರಿದಂತೆ ಎಂಟು ಸಂಘಟನೆಗಳನ್ನು ನಿಷೇಧಿಸಲಾಗಿದೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.