ADVERTISEMENT

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ಗೆ ಆರ್‌ಎಸ್‌ಎಸ್ ಬೆಂಬಲ: ಮಮತಾ ಬ್ಯಾನರ್ಜಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 2:47 IST
Last Updated 16 ಏಪ್ರಿಲ್ 2019, 2:47 IST
ಮುರ್ಷಿದಾಬಾದ್‌ ಜಿಲ್ಲೆಯ ಬೆಲಡಾಂಗಾದಲ್ಲಿ ಸೋಮವಾರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬಾನರ್ಜಿ ಅವರ ಒಂದು ನೋಟ–ಪಿಟಿಐ ಚಿತ್ರ
ಮುರ್ಷಿದಾಬಾದ್‌ ಜಿಲ್ಲೆಯ ಬೆಲಡಾಂಗಾದಲ್ಲಿ ಸೋಮವಾರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬಾನರ್ಜಿ ಅವರ ಒಂದು ನೋಟ–ಪಿಟಿಐ ಚಿತ್ರ   

ಕೋಲ್ಕತ್ತ: ರಾಜ್ಯದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಆರ್‌ಎಸ್‌ಎಸ್‌ ಜೊತೆಯಾಗಿ ಕೆಲಸ ಮಾಡುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಕಳೆದ ವರ್ಷ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನೂ ಮಮತಾ ಟೀಕಿಸಿದ್ದಾರೆ.

‘ಬೆಹರಾಂಪುರಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಅಧೀರ್ ರಂಜನ್‌ ಚೌಧರಿ ಹಾಗೂ ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಪ್ರತಿನಿಧಿಸುತ್ತಿರುವ ಜಂಗೀಪುರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಆರ್‌ಎಸ್‌ಎಸ್ ಬೆಂಬಲ ಇದೆ’ ಎಂದು ಆರೋಪಿಸಿದ್ದಾರೆ.

ADVERTISEMENT

ಅಭಿಜಿತ್ ಮುಖರ್ಜಿಜಂಗೀಪುರದ ಹಾಲಿ ಸಂಸದ. ಈ ಬಾರಿಯೂ ಕಾಂಗ್ರೆಸ್ ಟಿಕೆಟ್‌ನಡಿ ಸ್ಪರ್ಧಿಸಿರುವ ಅಭಿಜಿತ್ ಗೆಲುವಿಗೆ ಆರ್‌ಎಸ್‌ಎಸ್ ಕಾರ್ಯೋನ್ಮುಖವಾಗಿದೆ ಎಂದು ಮಮತಾ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.