ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) 100ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಅಕ್ಟೋಬರ್ 2ರಂದು ನಡೆಯಲಿರುವ ವಿಜಯದಶಮಿ ಉತ್ಸವಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮುಖ್ಯ ಅತಿಥಿಯಾಗಲಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಕೇಂದ್ರ ಕಚೇರಿಯಲ್ಲಿ ಬೆಳಿಗ್ಗೆ 7.40ಕ್ಕೆ ಉತ್ಸವಕ್ಕೆ ಚಾಲನೆ ದೊರೆಯಲಿದೆ ಎಂದು ಆರ್‌ಎಸ್‌ಎಸ್ ಪ್ರಕಟಣೆ ತಿಳಿಸಿದೆ.
ಶತಮಾನೋತ್ಸವ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಾತನಾಡಲಿದ್ದಾರೆ. 100ನೇ ದಿನಾಚರಣೆ ಪ್ರಯುಕ್ತ ಒಂದು ಲಕ್ಷ ಹಿಂದೂ ಸಮ್ಮೇಳನಗಳು ಹಾಗೂ ಸಾವಿರಾರು ಚರ್ಚೆ, ಸಭೆಗಳು ಸೇರಿದಂತೆ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದಾಗಿಯೂ ಸಂಘ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.