ADVERTISEMENT

ಕೇರಳ: ಆರ್‌ಎಸ್‌ಎಸ್‌ ಕಾರ್ಯಕರ್ತನ ಕೊಲೆ

ಪಿಟಿಐ
Published 24 ಫೆಬ್ರುವರಿ 2021, 19:47 IST
Last Updated 24 ಫೆಬ್ರುವರಿ 2021, 19:47 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಆಲಫುಳ : ಕೇರಳದ ಆಲಫುಳ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ಬುಧವಾರ ಎಸ್‌ಡಿಪಿಐ ಮತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ನಂದು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿವೆ.

ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿರುವ ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್‌ ಅವರು, ಈ ಘಟನೆ ಹಿಂದೆ ಪಿಎಫ್‌ಐ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.