ನವದೆಹಲಿ: ಹಿರಿಯ ರಾಜತಾಂತ್ರಿಕ ಅಧಿಕಾರಿ ರುಚಿರಾ ಕಾಂಬೋಜ್ ಅವರನ್ನು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿಯಾಗಿ ಮಂಗಳವಾರ ನೇಮಕ ಮಾಡಲಾಗಿದೆ.
ಭಾರತೀಯ ವಿದೇಶಾಂಗ ಸೇವೆಯ (ಐಎಫ್ಎಸ್) 1987ರ ಬ್ಯಾಚ್‌ನ ಅಧಿಕಾರಿಯಾಗಿರುವ ರುಚಿರಾ ಅವರು ಪ್ರಸ್ತುತ ಭೂತಾನ್‌ನಲ್ಲಿ ಭಾರತೀಯ ರಾಯಭಾರಿಯಾಗಿದ್ದಾರೆ.
ರುಚಿರಾ ಅವರು ಶೀಘ್ರ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.