ADVERTISEMENT

ಉತ್ತರ ಪ್ರದೇಶ ಚುನಾವಣೆ: ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ರಾಜಕೀಯ ಮುಖಂಡರ ದಂಡು

ಪಿಟಿಐ
Published 6 ಮಾರ್ಚ್ 2022, 11:25 IST
Last Updated 6 ಮಾರ್ಚ್ 2022, 11:25 IST
ಕಾಶಿ ವಿಶ್ವನಾಥ ದೇವಸ್ಥಾನ
ಕಾಶಿ ವಿಶ್ವನಾಥ ದೇವಸ್ಥಾನ   

ವಾರಾಣಸಿ: ತೀವ್ರ ಪೈಪೋಟಿಯಿಂದ ಕೂಡಿದ್ದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯು ಅಂತಿಮ ಹಂತ ತಲುಪಿದೆ. ಇನ್ನೊಂದೆಡೆ ತಮ್ಮ ಗೆಲುವಿಗಾಗಿ ರಾಜಕೀಯ ಮುಖಂಡರು ಇಲ್ಲಿಯ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ದಾಂಗುಡಿ ಇಡುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕ್ಷೇತ್ರ ಹಾಗೂ ಏಳನೇ ಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿರುವ ವಾರಾಣಸಿಯಲ್ಲಿ ಕಳೆದ ಕೆಲವು ದಿನಗಳಿಂದ ವಿಶ್ವನಾಥನ ಆಲಯದ ಮುಂದೆ ರಾಜಕೀಯ ನಾಯಕರ ಸರತಿಯ ಸಾಲು ಕಂಡು ಬರುತ್ತಿದೆ.

ವಿಶ್ವನಾಥ ದೇವಾಲಯವು ಶುಕ್ರವಾರ ಪ್ರಮುಖ ರಾಜಕೀಯ ಮುಖಂಡರಿಗೆ ವೇದಿಕೆಯಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾಶಿ ವಿಶ್ವನಾಥನ ದರ್ಶನ ಪಡೆದರು.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಭಾಗವಾಗಿ ರೋಡ್‌ ಶೋನಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿಯುವುದಕ್ಕೂ ಮುನ್ನ ಕಾಶಿ ವಿಶ್ವನಾಥನ ಆಲಯಕ್ಕೆ ತೆರಳಿದ್ದರು.

ಪ್ರಧಾನಿ ಮೋದಿ ಅವರಿಗೂ ಮುನ್ನ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಸ್ಮೃತಿ ಇರಾನಿ ಅವರು ದೇವಾಲಯಕ್ಕೆ ಭೇಟಿ ನೀಡಿದ್ದರು. ರಾತ್ರಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಸಹ ಕಾಶಿ ವಿಶ್ವನಾಥ ದೇವಾಲಯದತ್ತ ತೆರಳಿದ್ದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಕಾಶಿ ವಿಶ್ವನಾಥನಿಗೆ ನಮಿಸಿದ್ದರು. ಕೇಂದ್ರ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್‌ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಸಹ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.