ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 6ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ.
ಉಭಯ ರಾಷ್ಟ್ರಗಳ ನಡುವಣ ಒಪ್ಪಂದಗಳಿಗೆ ಸಂಬಂಧಿಸಿದಂತೆ ಭಾರತದ ಪ್ರಧಾನಿ ಮತ್ತು ರಷ್ಯಾದ ಅಧ್ಯಕ್ಷ ವಾರ್ಷಿಕ ಸಭೆಯಲ್ಲಿ ಪರಿಶೀಲನೆ ನಡೆಸುವ ವಾಡಿಕೆ ಇದೆ.
ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗಚಿ, ಭಾರತ–ರಷ್ಯಾ 21ನೇ ವಾರ್ಷಿಕ ಸಭೆಯಲ್ಲಿ ಭಾಗಿಯಾಗಲು ರಷ್ಯಾ ಅಧ್ಯಕ್ಷ ಪುಟಿನ್ ಅವರು ಡಿಸೆಂಬರ್ 6ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.
ಕೋವಿಡ್–19 ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ಸಭೆಯನ್ನು ಮುಂದೂಡಲಾಗಿತ್ತು. ಈವರೆಗೂ ಭಾರತ ಮತ್ತು ರಷ್ಯಾದಲ್ಲಿ ಒಟ್ಟು 20 ವಾರ್ಷಿಕ ಸಭೆಗಳು ನಡೆದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.