ADVERTISEMENT

ಶಬರಿಮಲೆ ಹೋರಾಟಗಾರ್ತಿ ರೆಹಾನಾ ಬಂಧನ

ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿದ ಆರೋಪ

ಪಿಟಿಐ
Published 27 ನವೆಂಬರ್ 2018, 19:43 IST
Last Updated 27 ನವೆಂಬರ್ 2018, 19:43 IST
ರೆಹಾನಾ ಫಾತಿಮಾ
ರೆಹಾನಾ ಫಾತಿಮಾ   

ಕೊಚ್ಚಿ: ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಬಿಎಸ್‌ಎನ್‌ಎಲ್‌ ಉದ್ಯೋಗಿ ಹಾಗೂಶಬರಿಮಲೆ ಪ್ರವೇಶಿಸಲು ಯತ್ನಿಸಿ ಸುದ್ದಿಯಾಗಿದ್ದ ಹೋರಾಟಗಾರ್ತಿ ರೆಹಾನಾ ಫಾತಿಮಾ ಅವರನ್ನು ಪಟ್ಟನಂತಿಟ್ಟಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಅಕ್ಟೋಬರ್‌ನಲ್ಲಿ ತಿಂಗಳ ಪೂಜೆಗಾಗಿಬಾಗಿಲು ತೆರೆದಾಗ32 ವರ್ಷ ವಯಸ್ಸಿನ ರೆಹಾನಾ ಅವರು ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಯತ್ನಿಸಿದ್ದರು.

ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡುವ ಉದ್ದೇಶದಿಂದರೆಹನಾ ಅವರು ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದಾರೆ ಎಂದು ರಾಧಾಕೃಷ್ಣ ಮೆನನ್‌ ದೂರು ನೀಡಿದ್ದರು. ಕೊಚ್ಚಿಯ ಪಾಲಾರಿವಟ್ಟಂನಲ್ಲಿರುವ ಕಚೇರಿಯಲ್ಲಿ ರೆಹಾನಾ ಅವರನ್ನು ಪೊಲೀಸರು ಬಂಧಿಸಿ ಪಟ್ಟನಂತಿಟ್ಟ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.

ADVERTISEMENT

ನಿರೀಕ್ಷಣಾ ಜಾಮೀನು ಕೋರಿರೆಹಾನಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ನಿರ್ದೇಶಿಸಿದೆ.

ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶಿಸಲು ಯತ್ನಿಸಿದ ಸಂದರ್ಭದಲ್ಲಿ ರೆಹಾನಾ ವಿರುದ್ಧ ಅಯ್ಯಪ್ಪ ಭಕ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಅವರನ್ನು ಸಾರ್ವಜನಿಕರ ಸಂಪರ್ಕ ಅಗತ್ಯವಿಲ್ಲದಪಾಲಾರಿವಟ್ಟಂನಲ್ಲಿರುವ ಕಚೇರಿಗೆ ವರ್ಗಾಯಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.