
ಪಿಟಿಐ
ಕೊಚ್ಚಿ: ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಟಿಡಿಬಿಯ ಮಾಜಿ ಅಧ್ಯಕ್ಷ ಎನ್.ವಾಸು ಸೇರಿ ಮೂವರು ಆರೋಪಿಗಳಿಗೆ ಕೇರಳ ಹೈಕೋರ್ಟ್ ಶುಕ್ರವಾರ ಜಾಮೀನು ನಿರಾಕರಿಸಿದೆ.
ವಾಸು ಅವರೊಂದಿಗೆ ಟಿಡಿಬಿಯ ತಿರುವಾಭರಣಂ ಮಾಜಿ ಕಮಿಷನರ್ ಕೆ.ಎಸ್.ಬೈಜು, ಮತ್ತು ಮಾಜಿ ಆಡಳಿತಾಧಿಕಾರಿ ಬಿ. ಮುರುಳಿ ಬಾಬು ಅವರಿಗೆ, ಹೈಕೋರ್ಟ್ ನ್ಯಾಯಮೂರ್ತಿ ಎ.ಬದರುದ್ದೀನ್ ಅವರಿದ್ದ ಪೀಠ ಜಾಮೀನು ನಿರಾಕರಿಸಿದ್ದಾರೆ.
ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ತಾಮ್ರದ ಕವಚಕ್ಕೆ ಲೇಪಿಸಿದ್ದ ಚಿನ್ನ ಹಾಗೂ ಶ್ರೀಕೋವಿಲ್‌ನ ಬಾಗಿಲ ಚೌಕಟ್ಟಿನ ಚಿನ್ನದ ತೂಕ ಕಡಿಮೆಯಾಗಿರುವ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.