
ಬಂಧನ
(ಪ್ರಾತಿನಿಧಿಕ ಚಿತ್ರ)
ಪತ್ತನಂತಿಟ್ಟ(ಕೇರಳ): ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಮಾಜಿ ಆಡಳಿತಾಧಿಕಾರಿ ಬಿ. ಮುರಾರಿ ಬಾಬು ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ಚಂಗನಾಶ್ಶೇರಿ ಗ್ರಾಮದ ಬಾಬು ಅವರ ನಿವಾಸದಲ್ಲಿ ಅವರನ್ನು ಎಸ್‌ಐಟಿ ತಂಡದವರು ಬುಧವಾರ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ಹೇಳಿವೆ. ಬಳಿಕ ಅವರನ್ನು ವಿಚಾರಣೆ ಸಲುವಾಗಿ ತಿರುವನಂತಪುರದ ಅಪರಾಧ ವಿಭಾಗಕ್ಕೆ ಸ್ಥಳಾಂತರಿಸಲಾಗಿದೆ. ಚಿನ್ನ ಕಳವು ಪ್ರಕರಣದ ಬೆನ್ನಲ್ಲೇ ಬಾಬು ಅವರನ್ನು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ)ಅಮಾನತುಗೊಳಿಸಿದೆ.
ಶಬರಿಮಲೆ ದೇಗುಲದ ದ್ವಾರ ಪಾಲಕರ ವಿಗ್ರಹಗಳಲ್ಲಿ ಮತ್ತು ಶ್ರೀಕೋವಿಲ್‌ನ (ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳಿಂದ ಚಿನ್ನ ಕಣ್ಮರೆ ಪ್ರಕರಣಗಳಲ್ಲಿ ಬಾಬು ಆರೋಪಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.