
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಕವಚದಲ್ಲಿನ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು (ಎಸ್‌ಐಟಿ) ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮಾಜಿ ಆಡಳಿತಾಧಿಕಾರಿ ಎಸ್. ಶ್ರೀಕುಮಾರ್ ಅವರನ್ನು ಬುಧವಾರ ಬಂಧಿಸಿದೆ.
ಎರಡು ವಾರಗಳ ಹಿಂದೆ ಎಸ್ ಶ್ರೀಕುಮಾರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಶ್ರೀಕುಮಾರ್ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ.
‘ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡಿದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಮಟ್ಟ ಕುಸಿಯುತ್ತದೆ ಮತ್ತು ಅರ್ಥಹೀನವಾಗುತ್ತದೆ’ ಎಂದು ನ್ಯಾಯಾಲಯವು, ಶ್ರೀಕುಮಾರ್ ಮತ್ತು ಟಿಡಿಬಿಯ ಮಾಜಿ ಕಾರ್ಯದರ್ಶಿ ಎಸ್ ಜಯಶ್ರೀ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ ಹೇಳಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.