ADVERTISEMENT

ಶಬರಿಮಲೆ ಚಿನ್ನ ಕಳವು ಪ್ರಕರಣ: ಸರ್ಕಾರಿ ಆಸ್ಪತ್ರೆಗೆ ಶಂಕರ ದಾಸ್‌ ದಾಖಲು

ಪಿಟಿಐ
Published 17 ಜನವರಿ 2026, 15:45 IST
Last Updated 17 ಜನವರಿ 2026, 15:45 IST
ಅಯ್ಯಪ್ಪ ಸ್ವಾಮಿ ದೇವಸ್ಥಾನ
ಅಯ್ಯಪ್ಪ ಸ್ವಾಮಿ ದೇವಸ್ಥಾನ   

ತಿರುವನಂತಪುರ (ಪಿಟಿಐ): ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿನ ಚಿನ್ನ ಕಳವು ಪ್ರಕರಣದಲ್ಲಿ ಬಂಧಿತರಾಗಿರುವ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಾಜಿ ಸದಸ್ಯ ಕೆ.ಪಿ. ಶಂಕರ ದಾಸ್‌ ಅವರನ್ನು ಖಾಸಗಿ ಆಸ್ಪತ್ರೆಯಿಂದ ಸರ್ಕಾರಿ ವೈದ್ಯಕೀಯ ಕಾಲೇಜು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. 

ಶ್ರೀಕೋವಿಲ್‌ನ (ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳಲ್ಲಿನ ಹಾಗೂ ದ್ವಾರಪಾಲಕರ ಪ್ರತಿಮೆಗಳ ಮೇಲೆ ಲೇಪಿಸಲಾಗಿದ್ದ ಚಿನ್ನದ ಕಳ್ಳತನ ಪ್ರಕರಣದಲ್ಲಿ ಶಂಕರ ದಾಸ್‌ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಬಂಧಿಸಲಾಗಿತ್ತು. ಬಳಿಕ ಪೊಲೀಸ್‌ ಕಾವಲಿನಲ್ಲಿ ಚಿಕಿತ್ಸೆ ಮುಂದುವರಿದಿತ್ತು. 

ಶಂಕರ ದಾಸ್‌, ಪ್ರಕರಣದಲ್ಲಿ ಬಂಧಿತರಾದ 12ನೇ ಆರೋಪಿ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.