
ಕೊಲ್ಲಂ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಗಳ ಆರೋಪಿ, ಟಿಡಿಬಿ ಮಾಜಿ ಅಧಿಕಾರಿ ಮುರಾರಿ ಬಾಬು ಅವರಿಗೆ ನ್ಯಾಯಾಲಯವೊಂದು ತಾಂತ್ರಿಕ ಕಾರಣಗಳ ಆಧಾರದಲ್ಲಿ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ವಿಶೇಷ ತನಿಖಾ ತಂಡ (ಎಸ್‌ಐಟಿ) ಬಾಬು ಅವರನ್ನು ಬಂಧಿಸಿ 90 ದಿನಗಳು ಕಳೆದರೂ ಎರಡು ಪ್ರಕರಣಗಳ ಕುರಿತು ಆರೋಪ ಪಟ್ಟಿ ಸಲ್ಲಿಸಿಲ್ಲ. ಈ ತಾಂತ್ರಿಕ ಅಂಶವನ್ನು ಆಧಾರವಾಗಿಟ್ಟುಕೊಂಡು ಕೊಲ್ಲಂ ವಿಚಕ್ಷಣಾ ನ್ಯಾಯಾಲಯದ ನ್ಯಾಯಧೀಶರಾದ ಮೋಹಿತ್ ಸಿ.ಎಸ್ ಅವರು ಜಾಮೀನು ಮಂಜೂರು ಮಾಡಿದ್ದಾರೆ.
ಬಾಬು ಅವರು ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದು, ಶ್ರೀಕೋವಿಲ್ ಬಾಗಿಲು ಚೌಕಟ್ಟಿನ ಚಿನ್ನ ಕಳವು ಪ್ರಕರಣದಲ್ಲಿ ಆರನೇ ಆರೋಪಿಯಾಗಿದ್ದಾರೆ.
ಚಿನ್ನ ಕಳವಿಗೆ ಪಿತೂರಿ ನಡೆಸಿದ ಆರೋಪದಡಿ ಬಾಬು ಅವರನ್ನು ಕಳೆದ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಆ ವೇಳೆ ಅವರು ಟಿಡಿಬಿಯ ಉಪ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.