ಶಬರಿಮಲೆ
– ಪಿಟಿಐ ಚಿತ್ರ
ತಿರುವನಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಚಿನ್ನ ನಾಪತ್ತೆಯಾಗಿರುವ ಪ್ರಕರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಕಂಡರಾರು ರಾಜೀವಾರು ಅವರನ್ನು ಎರಡನೇ ಪ್ರಕರಣದಲ್ಲೂ ಗುರುವಾರ ಬಂಧಿಸಲಾಗಿದೆ.
ಗರ್ಭಗುಡಿ ಬಾಗಿಲಿನ ಚೌಕಟ್ಟಿನಿಂದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವಾರು ಅವರನ್ನು ಈಗಾಗಲೇ ಬಂಧಿಸಿದ್ದು ಅವರನ್ನು ತಿರುವನಂತಪುರ ಜೈಲಿನಲ್ಲಿ ಇರಿಸಲಾಗಿದೆ.
ಇದೀಗ ದ್ವಾರಪಾಲಕ ಫಲಕಗಳಿಂದ ಚಿನ್ನ ಕಳೆದು ಹೋದ ಮತ್ತೊಂದು ಪ್ರಕರಣದಲ್ಲಿ ಎಸ್‌ಐಟಿ ಪೊಲೀಸರು ರಾಜೀವಾರು ವಿರುದ್ಧ ಮತ್ತೊಂದು ಬಂಧನವನ್ನು ದಾಖಲಿಸಿದ್ದಾರೆ.
ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಪ್ರಕರಣದ ಪ್ರಮುಖ ಆರೋಪಿ, ಬೆಂಗಳೂರಿನ ಉದ್ಯಮಿ ಉಣ್ಣಿಕೃಷ್ಣನ್ ಪೋಟಿ ಮತ್ತು ತಿರುವಾಂಕೂರು ದೇವಸ್ವ ಮಂಡಳಿಯ ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ನೀಡಿದ ಹೇಳಿಕೆಗೆಳ ಆಧಾರದ ಮೇಲೆ ರಾಜೀವಾರು ಅವರನ್ನು ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.