ಶಬರಿಮಲೆ ದೇವಾಲಯ
-ಪಿಟಿಐ ಚಿತ್ರ
ತಿರುವನಂತಪುರ: ಶಬರಿಮಲೆ ದೇವಸ್ಥಾನದ ಸ್ವರ್ಣ ಲೇಪಿತ ತಾಮ್ರದ ದ್ವಾರಪಾಲಕರ ಮೂರ್ತಿಗಳಲ್ಲಿನ ಬಂಗಾರದ ತೂಕದಲ್ಲಿ ಕಡಿಮೆಯಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಉದ್ಯಮಿ ಉಣ್ಣಿಕೃಷ್ಣನ್ ಪೋಟಿ ಅವರನ್ನು ಅವರ ನಿವಾಸದಲ್ಲಿ ಗುರುವಾರ ವಶಕ್ಕೆ ಪಡೆದರು.
‘ಪೋಟಿ ಅವರನ್ನು ವಶಕ್ಕೆ ಪಡೆದ ಬಳಿಕ, ತನಿಖೆಗಾಗಿ ಅವರನ್ನು ಅಜ್ಞಾನ ಸ್ಥಳಕ್ಕೆ ಕೊಂಡೊಯ್ಯಲಾಯಿತು’ ಎಂದು ಮೂಲಗಳು ಹೇಳಿವೆ. ಪ್ರಕರಣ ಸಂಬಂಧ ಚಿನ್ನದ ಲೇಪನ ಕಾರ್ಯ ಮಾಡಿದ ಚೆನ್ನೈನ ಸ್ಮಾರ್ಟ್ ಕ್ರಿಯೇಷನ್ಸ್ ಅವರಿಂದಲೂ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ.
ಪೋಟಿ ಅವರನ್ನು ಈ ಹಿಂದೆ ತಿರುವಾಂಕೂರು ದೇವಸ್ವಂ ಮಂಡಳಿಯವರು (ಟಿಡಿಬಿ) ಎರಡು ದಿನಗಳವರೆಗೆ ವಿಚಾರಣೆ ನಡೆಸಿದ್ದರು. ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಚೌಕಟ್ಟಿನಲ್ಲಿದ್ದ ಚಿನ್ನವೂ ಕಾಣೆಯಾದ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.