ಶಬರಿಮಲೆ ದೇಗುಲ
–ಪಿಟಿಐ ಚಿತ್ರ
ತಿರುವನಂತಪುರ: ಶಬರಿಮಲೆ ದೇವಸ್ಥಾನದ ಪ್ರವೇಶದ್ವಾರದ ಬಳಿ ನಿಲ್ಲಿಸಿರುವ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪಿತ ತಾಮ್ರದ ಕವಚದಲ್ಲಿನ ಚಿನ್ನದ ತೂಕವು 4.5 ಕೆ.ಜಿಯಷ್ಟು ಕಡಿಮೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಭದ್ರತಾ ಅಧಿಕಾರಿಗಳಿಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ.
ನ್ಯಾಯಾಲಯದ ಈ ನಿರ್ದೇಶನದಿಂದ ಮಂಡಳಿಗೆ ತೀವ್ರ ಮುಜುಗರ ಉಂಟಾಗಿದೆ. ಚಿನ್ನದ ತೂಕ ಕಡಿಮೆ ಆಗಿರುವ ಬಗ್ಗೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸುತ್ತಿದೆ. ‘ಚಿನ್ನದ ತೂಕದಲ್ಲಿ ವ್ಯತ್ಯಾಸ ಕಂಡುಬಂದಿದ್ದನ್ನು ದೇವಸ್ಥಾನದ ಮಂಡಳಿಯು ದಾಖಲು ಮಾಡಿಲ್ಲ’ ಎಂದೂ ಕೋರ್ಟ್ ಹೇಳಿದೆ.
‘2019ರಲ್ಲಿ ಮೂರ್ತಿಗಳಿಂದ ಚಿನ್ನ ಲೇಪಿತ ಕವಚವನ್ನು ಮೂರ್ತಿಯಿಂದ ಬೇರ್ಪಡಿಸಿ ಹೊಸದಾಗಿ ಚಿನ್ನ ಲೇಪನಕ್ಕೆಂದು ಚೆನ್ನೈನ ಕಂಪನಿಯೊಂದಿಗೆ ನೀಡಲಾಗಿತ್ತು. ಈ ವೇಳೆ ಚಿನ್ನದ ತೂಕವು 42.8 ಕೆ.ಜಿ ಇತ್ತು. ಕವಚ ತೆಗೆದಿಟ್ಟ ಸುಮಾರು ಒಂದು ತಿಂಗಳು 9 ದಿನಗಳ ಬಳಿಕ ಕಂಪನಿಗೆ ನೀಡಲಾಗಿತ್ತು. ಈ ಹೊತ್ತಿಗೆ ಚಿನ್ನದ ತೂಕವು 38.24 ಕೆ.ಜಿ.ಯಷ್ಟಾಗಿದೆ’ ಎಂದು ನ್ಯಾಯಾಲಯ ಬುಧವಾರ ಗುರುತಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.