
ಪತ್ತನಂತಿಟ್ಟ (ಕೇರಳ): ಶಬರಿಮಲೆಯ ವಾರ್ಷಿಕ ಮಂಡಲ ತೀರ್ಥಯಾತ್ರೆಗೆ ಇಲ್ಲಿವರೆಗೂ ಸುಮಾರು 25 ಲಕ್ಷ ಭಕ್ತರು ಅಯ್ಯಪ್ಪನ ದೇಗುಲಕ್ಕೆ ಭೇಟಿ ನೀಡಿದ್ದಾರೆ.
ಕಳೆದ ವರ್ಷ ಈ ಸಮಯಕ್ಕೆ ಸುಮಾರು 21 ಲಕ್ಷ ಭಕ್ತರು ಭೇಟಿ ನೀಡಿದ್ದರು. ಈ ವರ್ಷ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಪರಿಣಾಮಕಾರಿ ಯೋಜನೆ ಮತ್ತು ನಿರ್ವಹಣೆಯಿಂದ ಭಕ್ತರಿಗೆ ದೇವರ ದರ್ಶನ ಸುಗಮವಾಗಿದೆ ಎಂದು ಶಬರಿಮಲೆ ಮುಖ್ಯ ಪೊಲೀಸ್ ಸಮನ್ವಯಾಧಿಕಾರಿ ಎಡಿಜಿಪಿ ಎಸ್. ಶ್ರೀಜಿತ್ ಅವರು ಸೋಮವಾರ ತಿಳಿಸಿದ್ದಾರೆ.
‘ವರ್ಚುವಲ್ ಕ್ಯೂ ಪಾಸ್‌ನಲ್ಲಿ ನಿಗದಿಪಡಿಸಿದ ದಿನಾಂಕದಂದು ಭಕ್ತರು ಬರದ ಕಾರಣ, ಆರಂಭಿಕ ದಿನಗಳಲ್ಲಿ ಹೆಚ್ಚಿನ ಜನದಟ್ಟಣೆ ಉಂಟಾಗಿತ್ತು. ಆದರೆ, ಈಗ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ನಿಗದಿಪಡಿಸಿದ ದಿನಾಂಕದಂದು ಭಕ್ತರು ಭೇಟಿ ನೀಡಿದರೆ, ಎಲ್ಲರಿಗೂ ಅಯ್ಯಪ್ಪನ ದರ್ಶನಕ್ಕೆ ಸಾಕಷ್ಟು ಸಮಯ ಸಿಗುತ್ತದೆ. ವಾರಾಂತ್ಯದಲ್ಲಿ ಭಕ್ತರ ಸಂಖ್ಯೆ ಕಡಿಮೆಯಿದ್ದು, ವಾರದ ದಿನಗಳಲ್ಲಿ ಹೆಚ್ಚಿರಲಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಭಕ್ತರ ಸಂಖ್ಯೆ ಇನ್ನೂ ಹೆಚ್ಚಿರುವ ನಿರೀಕ್ಷೆಯಿದೆ’ ಎಂದು ಶ್ರೀಜಿತ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.