ADVERTISEMENT

ಶಬರಿಮಲೆ ವಿವಾದ: ತೀವ್ರಗೊಂಡ ಪ್ರತಿಭಟನೆ

ಪಿಟಿಐ
Published 10 ಅಕ್ಟೋಬರ್ 2018, 20:50 IST
Last Updated 10 ಅಕ್ಟೋಬರ್ 2018, 20:50 IST
ಕೊಚ್ಚಿಯಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದರು –ರಾಯಿಟರ್ಸ್‌ ಚಿತ್ರ
ಕೊಚ್ಚಿಯಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದರು –ರಾಯಿಟರ್ಸ್‌ ಚಿತ್ರ   

ತಿರುವನಂತಪುರ: ಎಲ್ಲ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಜಾರಿಗೊಳಿಸುವ ರಾಜ್ಯ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ವಿವಿಧ ಸಂಘಟನೆಗಳು ಬುಧವಾರ ಕೂಡ ರಾಜ್ಯದಾದ್ಯಂತ ರಸ್ತೆ ತಡೆ ಹಾಗೂರ‍್ಯಾಲಿ ನಡೆಸಿದವು.

‘ಶಬರಿಮಲೆ ಅಯ್ಯಪ್ಪ ದೇವಾಲಯದ ಆಚರಣೆಗಳನ್ನು ರಕ್ಷಿಸಿ’ ಎಂಬ ಘೋಷಣೆ ಕೂಗುತ್ತಾ ಭಾರಿ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಭಕ್ತರು ಪ್ರತಿಭಟನಾ ಮೆರವಣಿಗೆಗಳಲ್ಲಿ ಪಾಲ್ಗೊಂಡಿದ್ದರು.

ಕೇರಳದ ಮುಜರಾಯಿ ಖಾತೆ ಸಚಿವ ಕಡಗಂಪಳ್ಳಿ ಸುರೇಂದ್ರನ್‌ ಅವರಿಗೆ ಬಿಜೆಪಿ ಕಾರ್ಯಕರ್ತರು ತಿರುವನಂತಪುರದ ಕಳಕೂಟ್ಟಂನಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ.

ADVERTISEMENT

ಪಟ್ಟನಂತಿಟ್ಟ ಜಿಲ್ಲೆಯ ಪಂದಳಂನಿಂದ ಎನ್‌ಡಿಎ ನೇತೃತ್ವದ ರ್‍ಯಾಲಿ ಬುಧವಾರ ಆರಂಭಗೊಂಡಿದ್ದು, ಅಕ್ಟೋಬರ್‌ 15ರಂದು ತಿರುವನಂತಪುರದಲ್ಲಿ ಕೊನೆಗೊಳ್ಳಲಿದೆ.

ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಪಿ.ಎಸ್‌. ಶ್ರೀಧರನ್‌ ಪಿಳ್ಳೆ ಮತ್ತು ಭಾರತ್‌ ಧರ್ಮ ಜನ ಸೇನಾ (ಬಿಡಿಜೆಎಸ್‌) ಅಧ್ಯಕ್ಷ ತುಷಾರ್‌ ವೆಳ್ಳಪಳ್ಳಿ ಈ ರ‍್ಯಾಲಿಯ ನೇತೃತ್ವ ವಹಿಸಿದ್ದಾರೆ.

‘ಕೇರಳ ಸರ್ಕಾರ ಶಬರಿಮಲೆ ದೇವಾಲಯವನ್ನು ನಾಶಗೊಳಿಸಲು ಯತ್ನಿಸುತ್ತಿದೆ’ ಎಂದು ಶ್ರೀಧರನ್‌ ಪಿಳ್ಳೆ ಆರೋಪಿಸಿದ್ದಾರೆ.

ನಾಯರ್‌ ಸೇವಾ ಸಂಸ್ಥೆಯ (ಎನ್‌ಎಸ್‌ಎಸ್‌) ನೇತೃತ್ವದಲ್ಲಿ ತಿರುವನಂತಪುರದಲ್ಲಿ ಬೃಹತ್‌ ರ‍್ಯಾಲಿ ನಡೆದಿದೆ.

ಎರ್ನಾಕುಳಂ ಜಿಲ್ಲೆಯ ಆಲುವಾ ಮತ್ತು ಮೂವಾಟ್ಟುಪುಳದಲ್ಲಿ ಪ್ರತಿಭಟನಾಕಾರರರು ಮತ್ತು ಸಾರ್ವಜನಿಕರ ನಡುವೆ ಸಣ್ಣ ಪ್ರಮಾಣದಲ್ಲಿ ಘರ್ಷಣೆ ನಡೆದಿತ್ತು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.