ADVERTISEMENT

ಶಬರಿಮಲೆ ದೇವಾಲಯ ಪ್ರವೇಶ ಬಿಕ್ಕಟ್ಟು: ಸಂಧಾನ ಸಭೆ ವಿಫಲ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2018, 11:35 IST
Last Updated 16 ಅಕ್ಟೋಬರ್ 2018, 11:35 IST
   

ತಿರುವನಂತಪುರ:ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶದ ಬಿಕ್ಕಟ್ಟಿನ ಬಗ್ಗೆ ಮಾತುಕತೆ ನಡೆಸಲು ದೇವಸ್ಥಾನದ ಆಡಳಿತ ನೋಡಿಕೊಳ್ಳುವ ತಿರುವಾಂಕೂರು ದೇವಸ್ವಂ ಮಂಡಳಿಯು ಮಂಗಳವಾರಕರೆದಿದ್ದಸಭೆವಿಫಲವಾಗಿದೆ.

ಪಂದಳಂ ರಾಜ ಕುಟುಂಬದ ಪ್ರತಿನಿಧಿಗಳು, ದೇವಾಲಯದ ಪ್ರಧಾನ ಅರ್ಚಕರ ಕುಟುಂಬದ ಸದಸ್ಯರು,ತಿರುವಾಂಕೂರು ದೇವಸ್ವಂ ಮಂಡಳಿ ಮತ್ತು ಭಕ್ತರ ಗುಂಪುಗಳು ಸಭೆಯಲ್ಲಿ ಭಾಗವಹಿಸಿದ್ದವು. ಆದರೆ ಬಿಕ್ಕಟಿನ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಲಿಲ್ಲ ಎಂದುಪಂದಳಂ ರಾಜ ಕುಟುಂಬದ ಪ್ರತಿನಿಧಿಗಳು ತಿಳಿಸಿದ್ದಾರೆ.

ಬುಧವಾರ ಶಬರಿಮಲೆ ಅಯ್ಯಪ್ಪ ದೇವಾಸ್ಥಾನದಲ್ಲಿ ಮಾಸಿಕ ಪೂಜಾ ವಿಧಿವಿದಾನಗಳು ಆರಂಭವಾಗುವುದರಿಂದ ಮಹಿಳೆಯರ ಪ್ರವೇಶದ ಬಗ್ಗೆ ಭಕ್ತರಲ್ಲಿ ಆತಂಕ ಉಂಟಾಗಿದೆ.

ADVERTISEMENT

ದೇವಸ್ವಂ ಮಂಡಳಿಯು ಸುಪ್ರೀಂ ಕೋರ್ಟ್‌ ತೀರ್ಪಿನ ಪುನರ್‌ಪರಿಶೀಲನೆ ಬಗ್ಗೆ ಅಕ್ಟೋಬರ್‌ 19ರಂದು ಚರ್ಚಿಸುವ ಪ್ರಸ್ತಾವ ಮಂಡಿಸಿತು. ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದರು, ನಮ್ಮ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಮಂಡಳಿ ನಿರಾಸಕ್ತಿ ತೋರಿದ್ದರಿಂದ ನಾವುಸಭೆಯಿಂದ ಹೊರಬರಬೇಕಾಯಿತು ಎಂದುಪಂದಳಂ ರಾಜ ಕುಟುಂಬದ ಪ್ರತಿನಿಧಿ ಶಶಿಕುಮಾರ ವರ್ಮಾ ತಿಳಿಸಿದ್ದಾರೆ.

ಬಿಕ್ಕಟ್ಟಿನ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲು ಸಾಧ್ಯವಿಲ್ಲ, ದೇವಾಲಯ ಪ್ರವೇಶ ನಿರಾಕರಣೆ ಯಾರಿಂದಲೂ ಸಾಧ್ಯವಿಲ್ಲ ಎಂದು ಕೇರಳ ಸರ್ಕಾರ ಈಗಾಗಲೇ ಪ್ರಕಟಿಸಿದೆ.

ಈ ವಿಚಾರದಲ್ಲಿ ಯಾರೊಬ್ಬರು ಕಾನೂನು ಕೈಗೆತ್ತಿಕೊಳ್ಳಲು ಸರ್ಕಾರ ಬಿಡುವುದಿಲ್ಲ, ಭಕ್ತಾಧಿಗಳಿಗೆ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು ಎಲ್ಲಾ ರೀತಿಯ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಕೇರಳಸರ್ಕಾರ ಹೇಳಿದೆ. ಸುಪ್ರೀಂ ಕೋರ್ಟ್‌ ತೀರ್ಪನ್ನು ಕಾರ್ಯಗತಗೊಳಿಸುವ ಬಗ್ಗೆಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದನ್ನು ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.