
ಪಿಟಿಐ
ಪತ್ತನಂತಿಟ್ಟ: ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಆವರಣದಲ್ಲಿ ಭಾನುವಾರ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಭಕ್ತರಲ್ಲಿ ಆತಂಕ ಮೂಡಿಸಿತ್ತು. ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಬೆಂಕಿಯನ್ನು ತ್ವರಿತವಾಗಿ ನಂದಿಸಿದರು.
‘ಸನ್ನಿಧಾನದಲ್ಲಿರುವ (ದೇವಾಲಯ ಸಂಕೀರ್ಣ) ಅಗ್ನಿಕುಂಡದ ಬಳಿಯ ಆಲದ ಮರದ ಮೇಲೆ ಅಳವಡಿಸಿದ್ದ ಎಲ್ಇಡಿ ಆಲಂಕಾರಿಕ ದೀಪಗಳಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಬೆಳಿಗ್ಗೆ 8.20ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಹಾನಿ ಸಂಭವಿಸಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ 18 ಪವಿತ್ರ ಮೆಟ್ಟಿಲುಗಳ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಬಳಿಕ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.