
ಕೊಲ್ಲಂ: ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ, ಬೆಂಗಳೂರಿನ ಉದ್ಯಮಿ ಉಣ್ಣಿಕೃಷ್ಣನ್ ಪೋಟಿ ಅವರಿಗೆ ಸ್ಥಳೀಯ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ವಿಶೇಷ ತನಿಖಾ ತಂಡವು, (ಎಸ್‌ಐಟಿ) ಆರೋಪಿಯನ್ನು ಬಂಧಿಸಿದ 90 ದಿನಗಳ ಒಳಗಾಗಿ ನಿಯಮದಂತೆ ಆರೋಪಪಟ್ಟಿ ಸಲ್ಲಿಸಲು ವಿಫಲವಾಗಿರುವುದರಿಂದ ಜಾಮೀನು ನೀಡಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿತು.
ಕೊಲ್ಲಂ ವಿಜಿಲೆನ್ಸ್ ಕೋರ್ಟ್ ನ್ಯಾಯಮೂರ್ತಿ ಮೋಹಿತ್ ಸಿ.ಎಸ್ ಅವರು, ಶ್ರೀಕೋವಿಲ್‌ನ (ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳಲ್ಲಿನ ಚಿನ್ನ ಕಳವು ಪ್ರಕರಣದಲ್ಲಿ ಉಣ್ಣಿಕೃಷ್ಣನ್‌ಗೆ ಜಾಮೀನು ನೀಡಿ ಆದೇಶಿಸಿದರು. ಬಳಿಕ ಉಣ್ಣಿಕೃಷ್ಣನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಯಿತು.
ದೇಗುಲದ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪನದ ಕಳ್ಳತನದ ಪ್ರಕರಣದಲ್ಲಿ ಈ ಹಿಂದೆ ಉಣ್ಣಿಕೃಷ್ಣನ್‌ಗೆ ಜಾಮೀನು ನೀಡಲಾಗಿತ್ತು. ಆದರೆ ಶ್ರೀಕೋವಿಲ್ ಪ್ರಕರಣದಲ್ಲಿ ಅವರು ಬಂಧನಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.