ADVERTISEMENT

ಶಬರಿಮಲೆ ಯಾತ್ರೆ: ಮೂಲಸೌಕರ್ಯ ವ್ಯವಸ್ಥೆಯೇ ಸವಾಲು

ಪಿಟಿಐ
Published 12 ನವೆಂಬರ್ 2018, 18:30 IST
Last Updated 12 ನವೆಂಬರ್ 2018, 18:30 IST
FILES
FILES   

ಶಬರಿಮಲೆ(ಕೇರಳ): ಶಬರಿಮಲೆ ಯಾತ್ರೆ ಆರಂಭಕ್ಕೆ ಇನ್ನು ಆರು ದಿನ ಮಾತ್ರ ಬಾಕಿ ಉಳಿದಿದ್ದು, ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಮೂಲಸೌಕರ್ಯ ಕಲ್ಪಿಸುವುದು ಸವಾಲಾಗಿ ಪರಿಣಮಿಸಿದೆ.

ಎಲ್ಲ ವಯೋಮಾನದ ಮಹಿಳೆಯರಿಗೂ ದೇಗುಲ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅವಕಾಶ ಕಲ್ಪಿಸಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ಅಕ್ಟೋಬರ್‌ ಮತ್ತು ನವೆಂಬರ್‌ ಆರಂಭದಲ್ಲಿ ತಿಂಗಳ ಪೂಜೆ ವೇಳೆ ಮಹಿಳೆಯರು ದೇಗುಲ ಪ್ರವೇಶಕ್ಕೆ ಯತ್ನಿಸಿದಾಗ ಅವರ ವಿರುದ್ಧ ಭಾರಿ ಪ್ರತಿಭಟನೆ ನಡೆದಿತ್ತು.

ADVERTISEMENT

ಆಗಸ್ಟ್‌ನಲ್ಲಿ ಉಂಟಾದ ಪ್ರವಾಹದಿಂದಾಗಿ ಪಂಪಾದಲ್ಲಿ ವಿಶ್ರಾಂತಿ ಕೊಠಡಿ ಹಾಗೂ ಶೌಚಗೃಹಗಳಿಗೆ ಹಾನಿಯಾಗಿದೆ. ಈ ಬಾರಿ25 ಸಾವಿರ ಭಕ್ತರು ಬರುವ ನಿರೀಕ್ಷೆ ಇದ್ದು ಅವರಿಗೆ ಪಂಪಾ ನಗರ ಹಾಗೂ ಹತ್ತಿರದ ಸ್ಥಳಗಳಲ್ಲಿ ಮೂಲಸೌಕರ್ಯ ಕಲ್ಪಿಸುವುದು ಸವಾಲಾಗಿದೆ.

‘ನಾನು ಪ್ರತೀ ವರ್ಷ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಭೇಟಿ ನೀಡುತ್ತೇನೆ. ನೀಲಕಲ್‌ನಲ್ಲಿ ಅಗತ್ಯವಿರುವಷ್ಟು ವಸತಿ ಹಾಗೂ ಶೌಚಾಲಯ ವ್ಯವಸ್ಥೆ ಇರುವುದಿಲ್ಲ. ಮಹಿಳೆಯರಿಗಂತೂ ತುಂಬಾ ತೊಂದರೆಯಾಗುತ್ತದೆ’ ಎಂದು ಯಾತ್ರಾರ್ಥಿ ರಘು ಹೇಳಿದರು.

ತಿರುವಾಂಕೂರು ದೇವಸ್ಥಾನ ಮಂಡಳಿಯ (ಟಿಡಿಬಿ) ಅಧ್ಯಕ್ಷ ಎ.ಪದ್ಮಕುಮಾರ್ ಅವರು, ‘ಮೂಲಸೌಕರ್ಯ ಕಲ್ಪಿಸುವ ಕೆಲಸ ಐದು ದಿನಗಳಲ್ಲಿ ಪೂರ್ಣಗೊಳ್ಳಲಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.