ADVERTISEMENT

ರಾಜಸ್ಥಾನ ರಾಜಕಾರಣಕ್ಕೆ ಹೊಸ ತಿರುವು: ಸಚಿನ್ ಪೈಲಟ್ ಪರ ಹೇಳಿಕೆ ನೀಡಿದ ಕಾಂಗ್ರೆಸ್

ರಾಹುಲ್ ಗಾಂಧಿ, ಸಚಿನ್ ಪೈಲಟ್ ಮಾತುಕತೆ

ಏಜೆನ್ಸೀಸ್
Published 10 ಆಗಸ್ಟ್ 2020, 16:34 IST
Last Updated 10 ಆಗಸ್ಟ್ 2020, 16:34 IST
ರಾಹುಲ್ ಗಾಂಧಿ ಮತ್ತು ಸಚಿನ್ ಪೈಲಟ್
ರಾಹುಲ್ ಗಾಂಧಿ ಮತ್ತು ಸಚಿನ್ ಪೈಲಟ್   

ನವದೆಹಲಿ: ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರದ ಹಿತದೃಷ್ಟಿಯಿಂದ ಕೆಲಸ ಮಾಡಲಿದ್ದಾರೆ ಎಂದು ಸಚಿನ್ ಪೈಲಟ್ ಮತ್ತುರಾಹುಲ್ ಗಾಂಧಿ ನಡುವಿನ ಸಭೆ ಬಳಿಕ ಕಾಂಗ್ರೆಸ್ ಸೋಮವಾರ ಹೇಳಿದೆ.

ಉಭಯ ನಾಯಕರು 'ನೇರ, ಮುಕ್ತ ಮತ್ತು ನಿರ್ಣಾಯಕ ಚರ್ಚೆ' ನಡೆಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

'ಸಚಿನ್ ಪೈಲಟ್ ಮತ್ತು ಅತೃಪ್ತ ಶಾಸಕರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಆ ಕುರಿತು ಸೂಕ್ತ ನಿರ್ಣಯಕ್ಕೆ ಬರಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನಿರ್ಧಾರದ ಮೇರೆಗೆ ಮೂರು ಸದಸ್ಯರ ಸಮಿತಿಯನ್ನು ರಚಿಸಲು ಎಐಸಿಸಿ ನಿರ್ಧರಿಸಿದೆ' ಎಂದು ಹೇಳಿಕೆ ತಿಳಿಸಿದೆ.

ADVERTISEMENT

ಸಚಿನ್ ಪೈಲಟ್ ಅವರು ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರದ ಹಿತದೃಷ್ಟಿಯಿಂದ ಕೆಲಸ ಮಾಡಲು ಬದ್ಧರಾಗಿದ್ದಾರೆ ಎಂದೂ ಕೂಡ ಅದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.