ADVERTISEMENT

ತುರ್ತು ಪರಿಸ್ಥಿತಿಯಲ್ಲಿ ಹೋರಾಡಿದವರ ತ್ಯಾಗ ಮರೆಯುವುದಿಲ್ಲ: ಮೋದಿ

ಪಿಟಿಐ
Published 25 ಜೂನ್ 2020, 8:31 IST
Last Updated 25 ಜೂನ್ 2020, 8:31 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: 1975ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿದ ಎಲ್ಲರ ತ್ಯಾಗವನ್ನು ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗುರುವಾರ ಟ್ವೀಟ್ ಮಾಡಿರುವ ಅವರು, ‘ಇಂದಿಗೆ 45 ವರ್ಷಗಳ ಹಿಂದೆ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಭಾರತದ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಡಿದ, ಚಿತ್ರಹಿಂಸೆ ಅನುಭವಿಸಿದ ಎಲ್ಲರಿಗೂ ನನ್ನ ನಮನಗಳು’ ಎಂದು ಉಲ್ಲೇಖಿಸಿದ್ದಾರೆ. ಈ ಎಲ್ಲರ ತ್ಯಾಗ, ಹೋರಾಟವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಮೋದಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT