ಅಮೃತಸರ: ಪಂಜಾಬ್‌ನ ಅಮೃತಸರದಲ್ಲಿ ಶಿರೋಮಣಿ ಅಕಾಲಿದಳ (ಎಸ್‌ಎಡಿ) ನಾಯಕ, ಕೌನ್ಸಿಲರ್ ಹರ್ಜಿಂದರ್ ಸಿಂಗ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹರ್ಜಿಂದರ್ ಸಿಂಗ್ ಮೇಲೆ ಗುಂಡು ಹಾರಿಸಿದ್ದಾರೆ. ಕರಣ್, ಕಿಶನ್, ಸೂರಜ್ ಸೇರಿದಂತೆ 5ರಿಂದ 6 ಮಂದಿ ಯುವಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಹರ್ಜಿಂದರ್ ಸಿಂಗ್ ಅವರು ಕೆಲವು ದಿನಗಳ ಹಿಂದೆ ಆರೋಪಿಗಳ ವಿರುದ್ಧ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ಇದರ ಬೆನ್ನಲ್ಲೇ ಆರೋಪಿಗಳು ಹರ್ಜಿಂದರ್‌ಗೆ ಹಲವು ಬಾರಿ ಜೀವ ಬೆದರಿಕೆ ಹಾಕಿದ್ದರು ಎಂದು ಕುಟುಂಬಸ್ಥರು ಮಾಹಿತಿ ನೀಡಿರುವುದಾಗಿ ಪಂಜಾಬ್ ಪೊಲೀಸ್ ಎಡಿಸಿಪಿ ಹರ್ಪಾಲ್ ಸಿಂಗ್ ರಾಂಧವ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.