ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ನನ್ನು ಮುಂಬೈನ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿರುವುದು– ಪಿಟಿಐ ಚಿತ್ರ
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಬಾಂಗ್ಲಾದೇಶದ ಪ್ರಜೆ (ಆರೋಪಿ) ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾನೆ.
ಆರೋಪಿ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್, ಶುಕ್ರವಾರ ಸೆಷನ್ಸ್ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿಕೊಂಡಿದ್ದಾನೆ.
ಅಲ್ಲದೇ ತನಿಖಾ ಸಂಸ್ಥೆಯು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 47 ಅನ್ನು ಉಲ್ಲಂಘಿಸಿದೆ ಎಂದೂ ಅರ್ಜಿಯಲ್ಲಿ ಹೇಳಿಕೊಂಡಿದ್ದಾನೆ. (ಸೆಕ್ಷನ್ 47 ಒಬ್ಬ ವ್ಯಕ್ತಿಯ ಬಂಧನದ ಕಾರಣಗಳು ಮತ್ತು ಜಾಮೀನಿನ ಹಕ್ಕಿನ ಬಗ್ಗೆ ತಿಳಿಸುವುದಕ್ಕೆ ಸಂಬಂಧಿಸಿದೆ).
ಅರ್ಜಿಯ ವಿಚಾರಣೆ ಏಪ್ರಿಲ್ 1 ರಂದು ನಡೆಯಲಿದೆ.
ಜ.16ರಂದು ಮುಂಬೈನ ಬಾಂದ್ರಾದಲ್ಲಿರುವ ನಟ ಸೈಫ್ ಅವರ ನಿವಾಸಕ್ಕೆ ನುಗಿದ್ದ ಆರೋಪಿ ಅವರ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಹಲವು ಬಾರಿ ಇರಿದಿದ್ದ. ಘಟನೆ ನಡೆದು ಎರಡು ದಿನಗಳ ನಂತರ ಪೊಲೀಸರು ಶರೀಫುಲ್‌ನನ್ನು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.