
ಸೇಲಂ(ತಮಿಳುನಾಡು): ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್‍ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ಮಹಾರಾಷ್ಟ್ರ ಮೂಲದ ಸೂರಜ್ ಎಂದು ಗುರುತಿಸಲಾಗಿದೆ. ರ್‍ಯಾಲಿ ವೇಳೆ ಸೂರಜ್‌ಗೆ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
‘ಮಾರ್ಗಮಧ್ಯೆಯೇ ಸೂರಜ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಸೂರಜ್ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿರುವುದು ತಿಳಿದುಬಂದಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೂರಜ್ ಸಾವಿನ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ಪಕ್ಷದ ಮುಖಂಡ ವಿಜಯ್ ಅವರ ನೇತೃತ್ವದಲ್ಲಿ ಟಿವಿಕೆ ಸೇಲಂನಲ್ಲಿ ಇಂದು ಸಭೆ ನಡೆಸಿದೆ. ಕರೂರು ಕಾಲ್ತುಳಿತ ಹಿನ್ನೆಲೆ 4 ಸಾವಿರ ಜನರಿಗಷ್ಟೆ ರ್‍ಯಾಲಿಯಲ್ಲಿ ಭಾಗವಹಿಸಲು ಅನುಮತಿಸಲಾಗಿತ್ತು.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.